ಮಾಡತ್ತಾರು ಸಪರಿವಾರ ಶ್ರೀ ವ್ಯಾಘ್ರಚಾಮುಂಡಿ ದೈವಸ್ಥಾನದಲ್ಲಿ ಇಂದಿನಿಂದ ಫೆ.23ರವರೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ – ಕಹಳೆ ನ್ಯೂಸ್
ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಸಪರಿವಾರ ಶ್ರೀ ವ್ಯಾಘ್ರಚಾಮುಂಡಿ ದೈವಸ್ಥಾನದಲ್ಲಿ ಇಂದಿನಿಂದ ಫೆ.23ರವರೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ನಡೆಯಲಿದೆ.
ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಸಪರಿವಾರ ಶ್ರೀ ವ್ಯಾಘ್ರ ಚಾಮುಂಡಿ, ಉಳ್ಳಾಕ್ಲು, ಕೊರತಿದೈವ ಮತ್ತು ಗುಳಿಗ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ದೈವಗಳ ನೇಮೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ. ಇಂದು ಬೆಳಗ್ಗೆ ಗೊನೆಮುಹೂರ್ತ, ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆಯು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‍ನ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು. ಬಳಿಕ ಊರ ಪರವೂದ ಭಕ್ತಾಧಿಗಳಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಇಂದು ಸಂಜೆ ಕ್ಷೇತ್ರದ ತಂತ್ರಿಗಳು ಮತ್ತು ಋತ್ವಿಜರ ಆಗಮನವಾಗಲಿದ್ದು, ಬಳಿಕ ಭಂಡಾರದ ಮನೆ ಅತ್ತೆಜಾಲುವಿನಲ್ಲಿ ದೇವತಾಪ್ರಾರ್ಥನೆ, ಆಚಾರ್ಯವರಣೆ, ಪ್ರಾಸಾದಾದಿ ಬಿಂಬ ಪರಿಗ್ರಹ, ಸ್ವಸ್ತಿ ಪುಣ್ಯಾಹವಾಚನ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಪೂಜಾ ಬಲಿ, ನೂನತನ ಬಿಂಬ ಜಲಾಧಿವಾಸ, ಪ್ರಾಕಾರದಿಕ್ಬಲಿ, ಪ್ರಸಾದ ವಿತರಣೆ ನಡೆಯಲಿದೆ. ಇನ್ನು ಸ್ಥಳೀಯ ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.
ಇನ್ನು ಇಂದು ಸಂಜೆ 6.30ಕ್ಕೆ ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ಶ್ರೀ ಮಹಾಲಕ್ಷ್ಮೀ ಕ್ಷೇತ್ರ ಶ್ರೀ ಧಾಮ ಮಾಣಿಲದ ಪರಮಪೂಜ್ಯ ಯೋಗಿಕೌಸ್ತುಭ, ಕರ್ಮಯೋಗಿ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಾಜಿ ಉಸ್ತುವಾರಿ ಸಚಿವ ರಮಾನಾಥ್ ರೈ ವಹಿಸಲಿದ್ದಾರೆ. ಧಾರ್ಮಿಕ ಉಪಾನ್ಯಾಸವನ್ನು ಶ್ರೀಕಾಂತ್ ಶೆಟ್ಟಿ ಕಾರ್ಕಳ ಮಾಡಲಿದ್ದಾರೆ. ಇನ್ನು ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನಾಧಿಕಾರಿ ಚೆನ್ನಪ್ಪ ಗೌಡ, ಅಮೂಲ್ಯ ಗ್ಯಾಸ್‍ನ ಡಿ ಚಂದಪ್ಪ ಮೂಲ್ಯ, ಮದಗ ಶ್ರೀ ಜನಾರ್ಧನ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೆಂಕಟ್ರಮಣ ಭಟ್, ವಕೀಲರಾದ ಮಂಜುನಾಥ ಎನ್.ಎಸ್, ಉದ್ಯಮಿ ಸಹಜ್ ರೈ ಬಳಜ್ಜ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ ಭಾಗವಹಿಸಲಿದ್ದಾರೆ. ಸಂಜೆ 8ರಿಂದ ಶ್ರೀ ರಾಗ್ ಮ್ಯೂಸಿಕ್ ಪುತ್ತೂರು, ಮಂಗಳೂರು ಅರ್ಪಿಸುವ ಪದ್ಮರಾಜ್ ಬಿ.ಸಿ ಚಾರ್ವಾಕ ಸಾರಥ್ಯದ ಶ್ರೀ ವಿ ಕ್ರಿಯೇಶನ್ ಸ್ಟುಡಿಯೋ ಸಂಯೋಜಕತ್ವದಲ್ಲಿ ನೃತ್ಯ ಗಾನ ವೈಭವ ನಡೆಯಲಿದೆ.
ಇನ್ನು ನಾಳೆ ಬೆಳಗ್ಗೆ ಅತ್ತೆಜಾಲು ಕ್ಷೇತ್ರದ ಭಂಡಾರ ಮನೆಯಲ್ಲಿ ಮಹಾಗಣಪತಿ ಹೋಮ, ಬ್ರಹ್ಮಕಲಶ ಪೂಜೆ ನಡೆಯಲಿದೆ. ಬಳಿಕ ವ್ಯಾಘ್ರಚಾಮುಂಡಿ, ಉಳ್ಳಾಕ್ಲು, ಕೊರತಿ, ಗುಳಿಗ ಮತ್ತು ಸಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ತಂಬಿಲ ಸೇವೆ, ನಾಗದೇವರಿಗೆ ತಂಬಿಲ ಸೇವೆ, ಅತ್ತೆಜಾಲುವಿನಲ್ಲಿರುವ ಪರಿಚಾರಕರ ಮನೆಯ ಗೃಹಪ್ರವೇಶ, ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ ಮಾಡತ್ತಾರು ದೇವಸ್ಥಾನದಲ್ಲಿ ಸ್ವಸ್ತಿ ಪುಣ್ಯಾಹ ವಾಚನ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತುಪೂಜಾ ಬಲಿ, ಪ್ರಾಕಾರದಿಕ್ಬಲಿ, ಪ್ರಸಾದ ವಿತರಣೆ, ಹಾಗೂ ಪ್ರಸಾದ ಭೋಜನೆ ನಡೆಯಲಿದೆ. ಸಂಜೆ 4ರಿಂದ ಶ್ರೀ ಶಾರದಾ ಕಲಾ ಕೇಂದ್ರ ರಿ. ಪುತ್ತೂರು ಇವರಿಂದ ನೃತ್ಯ ವೈಭವ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.
ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಮಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಸಂಜೀವ ಮಠಂದೂರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಚಿವ ಸುನೀಲ್ ಕುಮಾರ್, ರಾಜ್ಯ ಧಾರ್ಮಿಕ ಪರಿಷತ್ ಅದಸ್ಯ ಸೂರ್ಯ ನಾರಾಯಣ ಭಟ್ ಕಶೆಕೋಡಿ, ಮುಳಿಯ ಜ್ಯುವೆಲ್ಸ್‍ನ ಕೇಶವ ಪ್ರಸಾದ್ ಮುಳಿಯ, ಉದ್ಯಮಿ ಶಶಿಧರ್ ಶೆಟ್ಟಿ ಗುರುವಾಯನಕೆರೆ, ಅಕ್ಷಯ ಕಾಲೇಜು ಅಧ್ಯಕ್ಷ ಜಯಂತ ನಡುಬೈಲು, ಉದ್ಯಮಿ ಲೀಲೇಶ್ ಆರ್ ರೈ, ಉಪ್ಪಿನಂಗಡಿ ಶ್ರೀ ಪದ್ಮವಿದ್ಯಾ ಪೆಟ್ರೋಲ್ ಪಂಪ್‍ನ ವಿದ್ಯಾಧರ್ ಜೈನ್, ಧ.ಗ್ರಾ.ಯೋ ಮೇಲ್ವಿಚಾರಕಿ ಜಯಶ್ರೀ ಭಾಗವಹಿಸಲಿದ್ದಾರೆ.
ಇನ್ನು ಫೆ.23ರಂದು ಬೆಳಗ್ಗೆ ಮಹಾಗಣಪತಿ ಹೋಮ, ಬ್ರಹ್ಮಕಲಶ ಪೂಜೆ ನಡೆಯಲಿದೆ. ಬಳಿಕ ಶ್ರೀ ವ್ಯಾಘ್ರ ಚಾಮುಂಡಿ, ಉಳ್ಳಾಕ್ಲು, ಕೊರತಿ ಮತ್ತು ಗುಳಿಗ ದೈವಗಳ ಮಂಚ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ತಂಬಿಲ ಸೇವೆ, ಮಂಗಳಾರತಿ, ನೇಮಸ್ತಿಕ ನಿಯಮಗಳ ನಿರ್ಣಯ, ಪ್ರಸಾದ ವಿತರಣೆ ನಡೆಯಲಿದೆ. ಬಳಿಕ ಅತ್ತೆಜಾಲು ಭಂಡಾರದ ಮನೆಯಿಂದ ಮಾಡತ್ತಾರು ದೈವಸ್ಥಾನಕ್ಕೆ ಭಂಡಾರ ಏರಲಿದೆ. ನಂತರ ಮಾಡತ್ತಾರು ಕ್ಷೇತ್ರದಲ್ಲಿ ಭಂಡಾರ ಏರಿ ತಂಬಿಲ ಸೇವೆ, ಎಣ್ಣೆ ಬೂಳ್ಯ, ಪ್ರಸಾದ ಭೋಜನ, ಸಪರಿವಾರ ದೈವಗಳಿಗೆ ನರ್ತನ ಸೇವೆ, ನೇಮೋತ್ಸವ ನಡೆಯಲಿದೆ.
ಬಳಿಕ ಧರ್ಮಸಭೆ ನಡೆಯಲಿದ್ದು, ಶ್ರೀ ರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ದಿವಸ್ಯ ಸಾನಿಧ್ಯ ವಹಿಸಲಿದ್ದು, ಆಶೀರ್ವಚನ ನೀಡಲಿದ್ದಾರೆರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಹಿಸಲಿದ್ದು, ಮುಖ್ಯ ಅತಿಥಿಗಲಾಗಿ ಸಚಿವ ಎಸ್ ಅಂಗಾರ, ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಹರೀಶ್ ಪೂಂಜಾ, ಅನುಗ್ರಹ ಮುಳಿಯ ದೈವಜ್ಞರು ಕೆವಿ ಗಣೇಶ್ ಭಟ್, ವಾಸ್ತುತಜ್ಞರಾದ ಮಹೇಶ್ ಮುನಿಯಂಗಳ, ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳು, ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು, ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ ಭಾಗವಹಿಲಸಿದ್ದಾರೆ. ಸಂಜೆ ಶ್ರೀ ರಾಮಕೃಷ್ಣ ಕಾಟುಕುಕ್ಕೆ ಮತ್ತು ಬಳಗದವರಿಂದ ಭಕ್ತಿ ರಸಮಂಜರಿ ನಡೆಯಲಿದೆ.