ಬೆಂಗಳೂರು (ಆ. 28): ಹಿಂದೂಗಳ ಭಾವನೆ ಕೆರಳಿಸಿದ ಆರೋಪದ ಮೇಲೆ ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.
ಗೋವುಗಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎಂದು ವಕೀಲ ಎನ್.ಕಿರಣ್ ಎಂಬುವವರು ದೂರು ಸಲ್ಲಿಸಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಗೋವುಗಳ ಬಗ್ಗೆ ಪ್ರಕಾಶ್ ರೈ ಕೆಟ್ಟದಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. ಹಲವೆಡೆ ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿರುವುದು ಇದಕ್ಕೆ ಸೇರಿದೆ.
ಪ್ರಕಾಶ್ ರೈ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ವಕೀಲ ಎನ್.ಕಿರಣ್ ಮನವಿ ಮಾಡಿದ್ದಾರೆ.