Tuesday, January 21, 2025
ಸುದ್ದಿ

ದಾಸಕೋಡಿಯಲ್ಲಿ ಧಗಧಗನೇ ಹೊತ್ತಿ ಉರಿದ ಒಣ ಹುಲ್ಲು ಸಾಗಾಟದ ಲಾರಿ – ಕಹಳೆ ನ್ಯೂಸ್

ಬಂಟ್ವಾಳ: ಹಾಸನದಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಒಣ ಹುಲ್ಲು ಸಾಗಾಟದ ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶನಿವಾರ ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಲಾರಿಯು ಹೆದ್ದಾರಿಯಲ್ಲಿ ಆಗಮಿಸುತ್ತಿರುವ ವೇಳೆ ಹೊತ್ತಿ ಉರಿದಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಉರಿದಿದೆ ಎನ್ನಲಾಗಿದ್ದು, ಬಂಟ್ವಾಳ ಅಗ್ನಿಶಾಮಕ ಠಾಣೆಯವರು ಘಟನಾ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ.

ಜತೆಗೆ ಶನಿವಾರ ತಾಲೂಕಿನ ಸಜೀಪಮೂಡದ ಬೊಳ್ಳಾಯಿ, ಮೊಡಂಕಾಪು ಸಮೀಪದ ಬಂಟಗುರಿ, ಪಲ್ಲಮಜಲಿನಲ್ಲೂ ಗುಡ್ಡ ಪ್ರದೇಶಕ್ಕೆ ಬೆಂಕಿ ಹಿಡಿದಿದೆ. ಬಂಟಗುರಿ, ಪಲ್ಲಮಜಲಿಗೆ ಬಂಟ್ವಾಳ ಅಗ್ನಿಶಾಮಕ ದಳ, ಬೊಳ್ಳಾಯಿಗೆ ಮಂಗಳೂರು ಅಗ್ನಿಶಾಮಕ ದಳದವರು ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ.