Sunday, November 24, 2024
ಸುದ್ದಿ

ರ‍್ಯಾಗಿಂಗ್ ​ಗೆ ವೈದ್ಯಕೀಯ ವಿದ್ಯಾರ್ಥಿನಿ ಬಲಿ : ವಾಟ್ಸ್​ಆಯಪ್​ ಚಾಟ್​ನಿಂದ ಸಿಕ್ಕಿಬಿದ್ದ ಸೀನಿಯರ್​ ಸ್ಟೂಡೆಂಟ್​ –ಕಹಳೆ ನ್ಯೂಸ್

ಹೈದರಾಬಾದ್​: ಹಿರಿಯ ವಿದ್ಯಾರ್ಥಿಗಳ ಕುಚೇಷ್ಟೆಯಿಂದ ಮನನೊಂದಿದ್ದ ಪ್ರೀತಿ ಕಳೆದ ಬುಧವಾರ ಆತ್ಮಹತ್ಯೆಗೆ ಯತ್ನಿಸಿದ್ದಳು. ಅಸ್ವಸ್ಥಳಾಗಿದ್ದ ಆಕೆಯನ್ನು ಆರಂಭದಲ್ಲಿ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್​ಗೆ ಸ್ಥಳಾಂತರ ಮಾಡಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರೀತಿ ತಂದೆ ನೀಡಿದ ದೂರಿನ ಆಧಾರದ ಮೇಲೆ ದ್ವಿತೀಯ ವರ್ಷದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಮೊಹಮ್ಮದ್​ ಅಲಿ ಸೈಫ್​ನಲ್ಲಿ ಬಂಧಿಸಲಾಗಿದ್ದು, ಆತನ ವಿರುದ್ಧ ರ್ಯಾಗಿಂಗ್​, ಆತ್ಮಹತ್ಯೆಗೆ ಪ್ರಚೋದನೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅಡಿ ಕಿರುಕುಳ ಪ್ರಕರಣ ದಾಖಲಿಸಲಾಗಿದೆ.

ಸಂತ್ರಸ್ತೆ ಮತ್ತು ಆರೋಪಿಯ ವಾಟ್ಸ್​ಆಯಪ್​ ಚಾಟ್‌ಗಳು ರ್ಯಾಗಿಂಗ್​ ನಡೆದಿರುವುದನ್ನು ಸೂಚಿಸುತ್ತಿವೆ ಎಂದು ವಾರಂಗಲ್ ಪೊಲೀಸ್ ಕಮಿಷನರ್ ಎವಿ ರಂಗನಾಥ್ ತಿಳಿಸಿದ್ದಾರೆ.

ಪ್ರೀತಿ ತಂದೆ ನರೇಂದರ್​ ಗಂಭೀರ ಆರೋಪ ಮಾಡಿದ್ದು, ಕಾಲೇಜಿನ ಸೀನಿಯರ್​ ವಿದ್ಯಾರ್ಥಿ ಮತ್ತು ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದಿದ್ದಾರೆ. ಅಲ್ಲದೆ, ಪ್ರೀತಿ ಮೃತದೇಹವನ್ನು ಹೈದರಾಬಾದ್​ನ ನಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರ ಮಾಡಲು ವಿರೋಧ ವ್ಯಕ್ತಪಡಿಸಿದ್ದು, ಅಂತಿಮ ವಿಧಿ-ವಿಧಾನಕ್ಕಾಗಿ ಮೃತದೇಹವನ್ನು ನಮಗೆ ಹಸ್ತಾಂತರಿಸಬೇಕೆಂದು ಪ್ರೀತಿ ಪಾಲಕರು ಒತ್ತಾಯ ಮಾಡಿದ್ದಾರೆ. ಅನೇಕ ಲಂಬಾಡಾ ಬುಡಕಟ್ಟು ಒಕ್ಕೂಟಗಳು ಹೈದರಾಬಾದ್‌ನ ನಿಮ್ಸ್, ಕಾಕತೀಯ ವೈದ್ಯಕೀಯ ಕಾಲೇಜು ಮತ್ತು ವಾರಂಗಲ್‌ನ ಎಂಜಿಎಂ ಆಸ್ಪತ್ರೆಯ ಮುಂದೆ ಪ್ರತಿಭಟನೆ ಸಹ ನಡೆಸಿದವು.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಎಸ್‌ಸಿ/ಎಸ್‌ಟಿ ರಾಷ್ಟ್ರೀಯ ಆಯೋಗವು ಸರ್ಕಾರ, ಎಂಜಿಎಂ ಆಸ್ಪತ್ರೆಯ ಸೂಪರಿಂಟೆಂಡೆಂಟ್, ಪ್ರಾಂಶುಪಾಲರು ಮತ್ತು ಪ್ರೀತಿ ವಿದ್ಯಾರ್ಥಿನಿಯಾಗಿದ್ದ ಅರಿವಳಿಕೆ ವಿಭಾಗದ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಿದೆ.

ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಆಸ್ಪತ್ರೆಗೆ ಭೇಟಿ ನೀಡಿ ಪ್ರೀತಿ ಕುಟುಂಬಕ್ಕೆ ಸಾಂತ್ವಾನ ಹೇಳಿ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.