Sunday, November 24, 2024
ಸುದ್ದಿ

ಶಾಲಾ ವಿದ್ಯಾರ್ಥಿಗಳ ಸವಲತ್ತಿಗೂ ಆಧಾರ್ ಕಡ್ಡಾಯ : ಶಿಕ್ಷಣ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು: ಶಾಲಾ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಮತ್ತು ಇತರೆ ಸರ್ಕಾರಿ ಸವಲತ್ತು ಪಡೆಯಲು ಎಸ್‍ಎಟಿಎಸ್ ತಂತ್ರಾಂಶದೊಂದಿಗೆ (ವಿದ್ಯಾರ್ಥಿ ಸಾಮರ್ಥ್ಯ ಪತ್ತೆ ವ್ಯವಸ್ಥೆ) ಆಧಾರ್ ಜೋಡಣೆ ಮಾಡುವುದನ್ನು ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯ ಎಲ್ಲ ವಿದ್ಯಾರ್ಥಿಗಳಿಂದ ಆಧಾರ್ ಕಾರ್ಡ್‍ಗಳನ್ನು ಸಂಗ್ರಹಿಸಿ, ತಂತ್ರಾಂಶದೊಂದಿಗೆ ಜೋಡಣೆ ಮಾಡಬೇಕು. ಖಾಸಗಿ ಶಾಲೆಯ ವಿದ್ಯಾರ್ಥಿಗಳ ಆಧಾರ್ ಜೋಡಣೆಗೂ ಮೊದಲು ಅವರಿಂದ ಒಪ್ಪಿಗೆ ಪತ್ರ ಪಡೆಯಬೇಕು ಎಂದು ಸೂಚಿಸಲಾಗಿದೆ.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ನೀಡುವ ವಿದ್ಯಾರ್ಥಿ ವೇತನವನ್ನು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‌ ಮೂಲಕ ವಿತರಿಸಲಾಗುತ್ತಿದೆ. ಅರ್ಹ ವಿದ್ಯಾರ್ಥಿಗಳಿಗೆ ವೇತನ ತಲುಪಲು, ವಿವಿಧ ಪ್ರವೇಶ ಪರೀಕ್ಷೆಗಳ ಹಾಜರಾತಿಗೆ ಆಧಾರ್‍ನಲ್ಲಿರುವಂತೆ ವಿದ್ಯಾರ್ಥಿ ಹೆಸರು ನಮೂದಿಸಲಾಗುವುದು ಎಂದು ವಿವರಿಸಿದ್ದಾರೆ.