Sunday, November 24, 2024
ಸುದ್ದಿ

ಕೊಯ್ಯೂರುನಲ್ಲಿ ಹಿಂದೂ ಜನಜಾಗೃತಿ ಸಮಿತಿಯಿಂದ ಆಯೋಜಿಸಿದ್ದ ಹಿಂದೂ ರಾಷ್ಟ್ರ ವ್ಯಾಖ್ಯಾನ ಸಂಪನ್ನ-ಕಹಳೆ ನ್ಯೂಸ್

ಬೆಳ್ತಂಗಡಿ – ಧರ್ಮವೇ ನಮ್ಮ ದೇಶದ ಮೂಲವಾಗಿದೆ, ಇಂದು ಹಿಂದೂಗಳಿಗೆ ಧರ್ಮಶಿಕ್ಷಣ ಲಭಿಸದೆ, ಸಮಾಜವು ಅದೋಗತಿಯೆಡೆಗೆ ಸಾಗುತ್ತಿದೆ. ಅದಕ್ಕಾಗಿ ಪ್ರತಿಯೊಬ್ಬ ಹಿಂದೂವೂ ಧರ್ಮಶಿಕ್ಷಣ ಪಡೆದು ಧರ್ಮಾಚರಣೆಯನ್ನು ಮಾಡುವ ಮೂಲಕ ಆಧ್ಯಾತ್ಮಿಕ ಬಲ ಹೆಚ್ಚಿಸಿ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಕಟ್ಟಿಬದ್ಧರಾಗಬೇಕಿದೆ ಎಂದು ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ಪೂಜ್ಯ ರಮಾನಂದ ಗೌಡ ಇವರು ಕರೆ ನೀಡಿದರು. ಅವರು 28 ಪೆಬ್ರವರಿ ಮಂಗಳವಾರದಂದು ಹಿಂದೂ ಜನಜಾಗೃತಿ ಸಮಿತಿಯು ಕೊಯ್ಯೂರಿನ ನಂದಗೋಕುಲ ಸಭಾ ಭವನ, ಆದೂರ್ ಪೆರಾಲ್ ನಲ್ಲಿ ಆಯೋಜಿಸಿದ್ದ ಹಿಂದೂ ರಾಷ್ಟ್ರ ವ್ಯಾಖ್ಯಾನದಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕರ್ನಾಟಕ ರಾಜ್ಯ ಸಮನ್ವಯಕರಾದ ಶ್ರೀ.ಚಂದ್ರ ಮೊಗೇರ ರವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪೂಜ್ಯ ರಮಾನಂದ ಗೌಡ ಇವರು ಮುಂದೆ ಮಾತನಾಡಿ ಹಿಂದೆ ಗುರುವಿನ ಮೂಲಕ ಜ್ಞಾನವನ್ನು ಪಡೆದು ಶಿಷ್ಯರು ಸಾಧನೆಯನ್ನು ಮಾಡುತ್ತಿದ್ದರು. ಭಾರತದಲ್ಲಿ ಗುರುವಿಗೆ ಅಗ್ರಸ್ಥಾನವಿದೆ. ಛತ್ರಪತಿ ಶಿವಾಜಿ ಮಹಾರಾಜರು ಮತ್ತು ಹಕ್ಕ ಬುಕ್ಕರು ಸಹ ತಮ್ಮ ರಾಜ್ಯ ಸ್ಥಾಪನೆಯನ್ನು ಮಾಡುವಾಗ ಗುರುಗಳ ಮಾರ್ಗದರ್ಶನ ಪಡೆದು ಮಾಡಿದರು. ಇದರಿಂದಾಗಿ ಅವರ ಧರ್ಮಸಂಸ್ಥಾಪನೆಯ ಕಾರ್ಯವು ಪೂರ್ಣವಾಯಿತು. ಪ್ರಸ್ತುತ ಕಾಲದಲ್ಲಿ ಅನೇಕ ದಾರ್ಶನಿಕರು, ಸಂತರು ಮತ್ತು ಸ್ವತಃ ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರೂ ಸಹ ಭಾರತ 2025 ರಲ್ಲಿ ಹಿಂದೂ ರಾಷ್ಟ್ರವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಹಾಗಾಗಿ ನಾವು ಈ ಹಿಂದೂ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಸಹಭಾಗಿ ಆಗಬೇಕಾದರೆ ಗುರುಗಳ ಮಾರ್ಗದರ್ಶನ ಪಡೆದು ಕಾರ್ಯ ಮಾಡಿದರೆ ಯಶಸ್ಸು ಖಂಡಿತ ಸಿಗುವುದು ಎಂದರು. ಕೊನೆಗೆ ಅವರು “ಧರ್ಮೋ ರಕ್ಷತಿ ರಕ್ಷಿತಃ” ಅಂದರೆ ಧರ್ಮ ಉಳಿಯಬೇಕಾದರೆ ನಾವೆಲ್ಲ ಹಿಂದೂಗಳು ಧರ್ಮಾಚರಣೆಯನ್ನು ಮಾಡಬೇಕು ಮತ್ತು ಆಧ್ಯಾತ್ಮಿಕ ಸಾಧನೆಯನ್ನು ಹೆಚ್ಚಿಸಬೇಕು ಎಂದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ.ಚಂದ್ರ ಮೊಗೇರ ಇವರು ಇಂದು ದೇಶದಲ್ಲಿ ಮತಾಂತರ, ಲವ್ ಜಿಹಾದ್, ಹಲಾಲ್ ಜಿಹಾದ್, ವಕ್ಫ್ ಕಾಯ್ದೆ, ಭಯೋತ್ಪಾದನೆ, ಭ್ರಷ್ಟಾಚಾರ ಸೇರಿದಂತೆ ಅನೇಕ ಅಹಿತಕರ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ.ನಮ್ಮ ದೇಶದಲ್ಲಿ ಬೆಳೆಯುತ್ತಿರುವ ಹೊಸ ಪೀಳಿಗೆಗಳಿಗೆ ಧರ್ಮದ ಕುರಿತು ಜ್ಞಾನ ಸಿಗದಿರುವುದೇ ಈ ಅಧರ್ಮಾಚರಣೆಗೆ ಮೂಲ ಕಾರಣವೆಂದು ತೋರುತ್ತಿದೆ. ಅನ್ಯ ಧರ್ಮೀಯರಿಗೆ ಅವರ ಶೈಕ್ಷಣಿಕ ಸಂಸ್ಥೆಗಳಲ್ಲಿ ಧರ್ಮದ ಶಿಕ್ಷಣ ಪಡೆಯುವ ಅವಕಾಶವಿದೆ,ಆದರೆ ಹಿಂದೂಗಳಿಗೆ ಎಲ್ಲಿಯೂ ಧರ್ಮಶಿಕ್ಷಣ ಸಿಗದ ಕಾರಣ ಅವರು ಧರ್ಮದಿಂದ ದೂರವಾಗುತ್ತಿದ್ದಾರೆ. ಈ ಕೊರತೆಯನ್ನು ನೀಗಿಸಲು ಹಿಂದೂ ಜನಜಾಗೃತಿ ಸಮಿತಿಯು ಕಳೆದ 20 ವರ್ಷಗಳಿಂದ ದೇಶದಾದ್ಯಂತ ಉಚಿತ ಧರ್ಮಶಿಕ್ಷಣ ವರ್ಗಗಳನ್ನು ನಡೆಸುತ್ತಿದ್ದು ಹಳ್ಳಿ ಹಳ್ಳಿಗಳಲ್ಲಿ ಹಿಂದುಗಳಲ್ಲಿ ಧರ್ಮದ ಆಚರಣೆ ಕುರಿತು ಜಾಗೃತಿ ಮೂಡಿಸುತ್ತಿದೆ. ಪ್ರತಿ ವಾರ ನಡೆಯುವ ಈ ವರ್ಗಗಳಲ್ಲಿ ಕುಂಕುಮ ಹೇಗೆ ಮತ್ತು ಏಕೆ ಇಡಬೇಕು, ದೇವಸ್ಥಾನದ ದರ್ಶನ ಹೇಗೆ ಮಾಡಬೇಕು ? ಬಲಗೈಯಲ್ಲಿ ಊಟ ಏಕೆ ಮಾಡಬೇಕು ? ಇಂತಹ ಧರ್ಮಕ್ಕೆ ಸಂಬಂಧಿಸಿದ ಅನೇಕ ಪ್ರಶ್ನೆಗಳಿಗೆ ಉತ್ತರ ಸಿಗಲಿವೆ. ಆದ್ದರಿಂದ ಕೊಯ್ಯುರು ನಲ್ಲಿ ಧರ್ಮಶಿಕ್ಷಣ ವರ್ಗಗಳನ್ನು ಪ್ರಾರಂಭಿಸುವವರಿದ್ದು ಆಸಕ್ತರು ಸಹಭಾಗಿ ಆಗಬಹುದು ಎಂದು ಕರೆ ನೀಡಿದರು.

ತಮ್ಮ ವಿಶ್ವಾಸಿ,

ಶ್ರೀ. ಚಂದ್ರ ಮೊಗೇರ

ಸಮನ್ವಯಕರು, ದಕ್ಷಿಣ ಕರ್ನಾಟಕ

ಹಿಂದೂ ಜನಜಾಗೃತಿ ಸಮಿತಿ,