Tuesday, January 21, 2025
ಸುದ್ದಿ

ರಾಜ್ಯ ಸರಕಾರಿ ನೌಕರರ ಮುಷ್ಕರ : ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಿಕೆ..! – ಕಹಳೆ ನ್ಯೂಸ್

ಬೆಂಗಳೂರು : 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ನಡೆಸುತ್ತಿರುವ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆ ಇಂದು ನಡೆಯಬೇಕಿದ್ದ ಪರೀಕ್ಷೆಗಳ ಮೇಲೆ ಪ್ರಭಾವ ಬೀರಿದ್ದು, ಇಂದು ಬೆಂಗಳೂರು, ಕಲಬುರಗಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳು ಮುಂದೂಡಲ್ಪಟ್ಟಿದೆ.
ಹೀಗಾಗಿ, ಬೆಂಗಳೂರಿನಲ್ಲಿ ಇಂದು ನಡೆಯಬೇಕಿದ್ದ ಎಸ್‍ಎಸ್‍ಎಲ್.ಸಿ ತೃತೀಯ ಭಾμÉ ಹಿಂದಿ ವಿಷಯದ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಈ ಪರೀಕ್ಷೆಯನ್ನು ಈ ಮಾರ್ಚ್ 6 ರಂದು ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯ ಸರ್ಕಾರಿ ನೌಕರರು ಮುಷ್ಕರ 7ನೇ ವೇತನ ಆಯೋಗ ವರದಿ ಜಾರಿಗೆಗೊಳಿಸಲು ಹಿಂದಿನಿಂದಲೂ ಮನವಿ ಸಲ್ಲಿಸುತ್ತಿದ್ದು ಇದಕ್ಕೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಕಾರಣ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಈ ಮುಷ್ಕರಕ್ಕೆ ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಯ ಸುಮಾರು 10 ಲಕ್ಷ ನೌಕರರು ಸಾಥ್ ನೀಡಿ ಬೆಂಬಲ ವ್ಯಕ್ತಪಡಿಸಿದ್ದು, ಹೀಗಾಗಿ, ಇಂದು ರಾಜ್ಯದ ಹಲವೆಡೆ ನಡೆಯಬೇಕಿದ್ದ ಪದವಿಪೂರ್ವ ಕಾಲೇಜುಗಳ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.