Tuesday, January 21, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ : ವಿಕೃತ ಕಾಮಿ ಅಬ್ದುಲ್‌ ಹಮೀದ್‌ಗೆ 3 ವರ್ಷ ಸಜೆ – ಕಹಳೆ ನ್ಯೂಸ್

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಮಂಗಳೂರಿನ ನ್ಯಾಯಾಲಯ ಮೂರು ವರ್ಷ ಸಜೆ ವಿಧಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಜಪೆಯ ಅಬ್ದುಲ್‌ ಹಮೀದ (50) ಅಲಿಯಾಸ್‌ ಹಮೀದ ಶಿಕ್ಷೆಗೊಳಗಾದವನು. ಈತ 2021ರ ಜೂ.

3ರಂದು ನೆರೆಮನೆಯ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್‌ ರಾಘವೇಂದ್ರ ನಾಯ್ಕ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಮತ್ತು ಎಫ್ಟಿಎಸ್‌ಸಿ-1(ಪೋಕ್ಸೋ) ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಫೆ. 27ರಂದು ಆದೇಶ ನೀಡಿದ್ದಾರೆ. ಅಪರಾಧಿ ಅಬ್ದುಲ್‌ ಹಮೀದ್‌ಗೆ ಪೋಕೊà ಕಾಯಿದೆಯ ಕಲಂ 8ರಡಿ 3 ವರ್ಷ ಸಾದಾ ಸಜೆ ಮತ್ತು 5,000 ರೂ. ದಂಡ, ಭಾರತೀಯ ದಂಡ ಸಂಹಿತೆಯ ಕಲಂ 448ರಡಿ 6 ತಿಂಗಳ ಸಾದಾ ಸಜೆ, ಕಲಂ 354ರಡಿ ಒಂದು ವರ್ಷ ಸಾದಾ ಸಜೆ ಮತ್ತು 1,000 ರೂ. ದಂಡ, ಕಲಂ 323ರಡಿ 6 ತಿಂಗಳ ಸಾದಾ ಸಜೆ ಮತ್ತು 1,000 ರೂ. ದಂಡ, ಕಲಂ 506ರಡಿ 1 ವರ್ಷ ಸಾದಾ ಸಜೆ ಹಾಗೂ 1,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ಬಾಲಕಿಗೆ 1 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಪ್ರಾಸಿಕ್ಯೂಷನ್‌ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ವಾದಿಸಿದ್ದರು