Tuesday, January 21, 2025
ಉಡುಪಿಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಮನವಿಪತ್ರ ಬಿಡುಗಡೆ –ಕಹಳೆ ನ್ಯೂಸ್

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಮನವಿ ಪತ್ರವನ್ನು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆ ಸೋಮವಾರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಆಚರಿಸುತ್ತಿದ್ದು, ಕಾರ್ಯಕ್ರಮದಂಗವಾಗಿ ಜಿಲ್ಲೆಯಾದ್ಯಂತ ವಿವಿಧ ೨೫ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.

ಮುಖ್ಯವಾಗಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ, ಕಟ್ಟಡ ಅಭಿವೃದ್ಧಿ ಸೇರಿದಂತೆ ವಿವಿಧ ಯೋಜನೆಗಳಿಗೆ ಸುಮಾರು ೨ ಕೋ. ರೂ.ಗಳ ಯೋಜನೆ ರೂಪಿಸಲಾಗಿದೆ.

ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ| ಹೆಗ್ಗಡೆ ಪೂರ್ಣ ಸಹಕಾರದ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜೇಶ ಶೆಟ್ಟಿ ಅಲೆವೂರು, ರಜತ ಮಹೋತ್ಸವ ಸಮಿತಿ ಸಂಚಾಲಕ ಮೊಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಸದಸ್ಯ ಪುಂಡಲೀಕ ಮರಾಠೆ ಇದ್ದರು.