Wednesday, January 22, 2025
ಸುದ್ದಿ

ತಾಯಿ ಮೃತದೇಹದ ಜೊತೆ ಎರಡು ದಿನ ಕಳೆದ ಮಗ –ಕಹಳೆ ನ್ಯೂಸ್

ಸಿಲಿಕಾನ್ ಸಿಟಿಯಲ್ಲಿ 14 ವರ್ಷದ ಬಾಲಕ ತನ್ನ ತಾಯಿಯ ಶವದೊಂದಿಗೆ ಎರಡು ದಿನ ಕಳೆದ ಮನಕಲಕುವ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನ ಆರ್.ಟಿ.ನಗರದ ಮನೆಯೊಂದರಲ್ಲಿ ಫೆ.26ರಂದು ಅಣ್ಣಮ್ಮ(44) ಎಂಬ ಮಹಿಳೆ ಮೃತಪಟ್ಟಿದ್ದು, ಆದರೆ ಬಾಲಕ ತಾಯಿ ಮಾತು ಬಿಟ್ಟಿದ್ದಾರೆ, ಮಲಗಿದ್ದಾರೆ ಎಂದೇ ತಿಳಿದು ತನ್ನ ತಾಯಿಯ ಶವದ ಜೊತೆ ಎರಡು ದಿನ ಕಳೆದಿದ್ದಾನೆ.

ಆರ್.ಟಿ.ನಗರ ಠಾಣೆ ವ್ಯಾಪ್ತಿಯ ರೇಣುಕಾ ಯಲ್ಲಮ್ಮ ಗಂಗಮ್ಮ ದೇವಸ್ಥಾನ ಬಳಿ ಇರುವ ಮನೆಯಲ್ಲಿ ಫೆಬ್ರವರಿ 26 ರಂದು ಲೋ ಬಿಪಿ ಮತ್ತು ಶುಗರ್‌ನಿಂದಾಗಿ ಅಣ್ಣಮ್ಮ ಮಲಗಿದ್ದಲ್ಲೇ ಮೃತಪಟ್ಟಿದ್ದರು. ಫೆಬ್ರವರಿ 28ರ ವರೆಗೂ ಬಾಲಕ ತನ್ನ ತಾಯಿಯ ಶವದ ಜೊತೆಗೆ ಕಾಲ ಕಳೆದಿದ್ದಾನೆ. ಹೊರಗೆ ಬಂದು ಊಟ, ತಿಂಡಿ ತೆಗೆದುಕೊಂಡು ಮತ್ತೆ ಮನೆ ಸೇರಿಕೊಳ್ಳುತ್ತಿದ್ದ, ರಾತ್ರಿ ಪೂರ್ತಿ ತಾಯಿಯ ಜೊತೆಯಲ್ಲೇ ಮಲಗಿ ಕಾಲ ಕಳೆಯುತ್ತಿದ್ದನಂತೆ. ಆದರೆ ಏರಿಯಾದ ಜನರಿಗೆ ತಾಯಿ ಸಾವಿನ ಬಗ್ಗೆ ಕೊಂಚವೂ ಮಾಹಿತಿ ನೀಡಿಲ್ಲ. ನಂತರ ತಂದೆ ಸ್ನೇಹಿತರಿಗೆ ತನ್ನ ತಾಯಿ ಮಾತನಾಡ್ತಿಲ್ಲ ಎಂದು ಹೇಳಿದ್ದನಂತೆ. ಆಗ ಸ್ನೇಹಿತರು ಮನೆಗೆ ಬಂದು ನೋಡಿದಾಗ ಅಣ್ಣಮ್ಮ ಮೃತಪಟ್ಟಿರುವುದು ಗೊತ್ತಾಗಿದೆ.

ಒಂದು ವರ್ಷದ ಹಿಂದೆಯಷ್ಟೇ ಕಿಡ್ನಿ ವೈಫಲ್ಯದಿಂದ ಅಣ್ಣಮ್ಮ ಪತಿ ಸಾವನ್ನಪ್ಪಿದ್ದು, ತಾಯಿ ಮತ್ತು ಮಗ ಇಬ್ಬರೇ ಮನೆಯಲ್ಲಿ ವಾಸವಿದ್ರು. ಆದ್ರೆ ಈಗ ತಾಯಿ ಕೂಡ ಮೃತಪಟ್ಟಿದ್ದು ಅಮಾಯಕ ಬಾಲಕ ತಬ್ಬಲಿಯಾಗಿದ್ದಾನೆ. ಆರ್.ಟಿ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.