Friday, January 24, 2025
ಸುದ್ದಿ

4 ವರ್ಷದಿಂದ ನ್ಯಾಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಖದೀಮರನ್ನ ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು -ಕಹಳೆ ನ್ಯೂಸ್

ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಇಬ್ಬರು ಆರೋಪಿಯನ್ನು ಇದೀಗ ಬೆಳ್ತಂಗಡಿ ಪುಂಜಾಲಕಟ್ಟೆ ಠಾಣಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ 4 ವರ್ಷದಿಂದ ನ್ಯಾಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಪುತ್ತಿಲ ಗ್ರಾಮದ ಕಳಂಜಿಬೈಲು ನಿವಾಸಿ ನಾಸೀರುದ್ದೀನ್ (25)ನನ್ನು ಬಂಧಿಸಿರುವ ಪೊಲೀಸರು ಆತನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ 1 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪುತ್ತಿಲ ಗ್ರಾಮದ ಸಿನಾನ(23) ಎಂಬಾತನನ್ನು ಕೂಡಾ ಬಂಧಿಸಲಾಗಿದೆ.

ಪುಂಜಾಲಕಟ್ಟೆ ಪೊಲೀಸ್ ಠಾಣಾ ಸಿಬ್ಬಂದಿ ನವೀನ, ಸಂದೀಪ್, ಶಾಮರಾಯ ಅವರು ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಇವರಿಗೆ ನ್ಯಾಯಾಲಯ ಜಾಮೀನು ನೀಡಿದೆ.