Thursday, January 23, 2025
ಸುದ್ದಿ

ಪಂದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಬೆಳ್ತಂಗಡಿ ವತಿಯಿಂದ, ರೈತ ಸಭಾ ಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ –ಕಹಳೆ ನ್ಯೂಸ್

ಪಂದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಬೆಳ್ತಂಗಡಿ ವತಿಯಿಂದ, ರೈತ ಸಭಾ ಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಇಂದು ನಡೆದಿದೆ. ನೂತನ ರೈತ ಸಭಾಭವನವನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಲೋಕಾರ್ಪಣೆಗೊಳಿಸಿದ್ರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದ್ಮುಂಜ ಪ್ರಾ.ಕೃ.ಪ.ಸ. ಸಂಘ ನಿಯಮಿತದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರೈತ ಗೋದಾಮು ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್ ಉದ್ಘಾಟಿಸಿದ್ದು, ಕ್ಯಾಂಪ್ಕೊ ಬ್ರಾಂಚ್‌ನ್ನು ಕ್ಯಾಂಪ್ಕೋ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ ಉದ್ಘಾಟಿಸಿದ್ದಾರೆ. ಇನ್ನೂ ರೈತ ಭವನದ ಮೀಟಿಂಗ್ ಹಾಲ್‌ನ್ನು ಡಿ.ಸಿ.ಸಿ ಬ್ಯಾಂಕ್‌ನ ನಿರ್ದೇಶಕರಾದ ನಿರಂಜನ್ ಬಾವಂತಬೆಟ್ಟು ಉದ್ಘಾಟಿಸಿದ್ದು, ಕೃಷಿ ಯಂತ್ರ ಮೇಳವನ್ನು ಡಿ.ಸಿ.ಸಿ ಬ್ಯಾಂಕ್‌ನ ನಿರ್ದೇಶಕರಾದ ಶಶಿಕುಮಾರ್ ರೈ ಬಲ್ಯೊಟ್ಟು ಉದ್ಘಾಟಿಸಿದ್ದಾರೆ. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷರಾದ ಸುಂದರ ಗೌಡ ಇಚ್ಚಿಲ, ಬೆಳ್ತಂಗಡಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ವಿ ಪ್ರತಿಮಾ, ದ.ಕ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ಪದ್ಮುಂಜ ಪ್ರಾ.ಕೃ.ಪ.ಸ. ಸಂಘ ನಿಯಮಿತದ ಉಪಾಧ್ಯಕ್ಷರಾದ ಅಶೋಕ್ ಗೌಡ ಪಾಂಜಾಳ, ಬೆಳ್ತಂಗಡಿಯ ಎಲ್.ಡಿ ಬ್ಯಾಂಕ್ ಅಧ್ಯಕ್ಷರಾದ ಸೋಮನಾಥ ಬಂಗೇರ, ದ.ಕ ಸಹಕಾರ ಸಂಘಗಳ ಉಪ ನಿಬಂಧಕರಾದ ತ್ರೀವೆಣಿ ರಾವ್.ಕೆ, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಗೋಪಾಲ ಗೌಡ, ಪಿಲಿಗೂಡು ಕಣಿಯೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಕುಸುಮಾವತಿ ಕೆ., ಬುಳ್ಳೆರಿ ಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಸದಾನಂದ ಪೂಜಾರಿ, ಬಂದಾರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪರಮೇಶ್ವರಿ ಗೌಡ ಪುಯಿಲ, ಬೈಪಾಡಿ ಹಾಲು ಉತ್ಪಾದಕರ ಸಹಾಕಾರಿ ಸಂಘದ ಅಧ್ಯಕ್ಷರಾದ ಉಮೇಶ್ ಗೌಡ, ಬಂದಾರು ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾದ ಗಮಘಾಧರ ಪೂಜಾರಿ , ಕಣಿಯೂರು ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾದ ಜಲಜಾಕ್ಷಿ, ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಬಾಬು ಗೌಡ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಂಘದ ಅಧ್ಯಕ್ಷರಾದ ಮಮತಾ ಗೌಡ ಕೆಲೆಂಜಿಮಾರು, ಪದ್ಮುಂಜ ಪ್ರಾ.ಕೃ.ಪ.ಸ. ಸಂಘ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಘುಪತಿ ಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇನ್ನೂ ರೈತ ಭವನ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ರಾತ್ರಿ 7 ಗಂಟೆಗೆ ವಿಜಯ್ ಕೊಡಿಯಾಲ್ ಬೈಲ್ ನಿರ್ದೇಶನದ ಕಲಾಸಮಗಮದ ಕಲಾವಿದರಿಂದ ಶಿವದೂತೆ ಗುಳಿಗೆ ವಿಭಿನ್ನ ಶೈಲಿಯ ತುಳು ನಾಟಕ ಪ್ರದರ್ಶಗೊಳ್ಳಲಿದೆ