Thursday, January 23, 2025
ಸುದ್ದಿ

ಏಳು ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್-ಕಹಳೆ ನ್ಯೂಸ್

ಬಂಟ್ವಾಳ: ಹಳೆಯ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದುಕೊಂಡು ಕಳೆದ ಏಳು ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ಇಂದು ವಿಟ್ಲದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ‌ಹಾಜರುಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿಟ್ಲ ನಿವಾಸಿ ಆಕ್ಬರ್ ಎಂಬಾತನನ್ನು ಪೋಲೀಸರು ಬಂಧಿಸಿದ್ದಾರೆ.

ಅಕ್ರಮವಾಗಿ ಮರಳು ಸಾಗಾಟ ಮಾಡಿದ ಪ್ರಕರಣದ ಆರೋಪಿಯಾಗಿದ್ದ ಈತ ಆ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಖಚಿತ ಮಾಹಿತಿ ಮೇಲೆ ಈತನನ್ನು ವಿಟ್ಲದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ಈತನಿಗೆ 10000 ಸಾವಿರ ರೂ ದಂಡ ವಿಧಿಸಿದೆ.