Thursday, January 23, 2025
ಸುದ್ದಿ

ವೇಗವಾಗಿ ಚಲಿಸುತ್ತಿದ್ದ ಟ್ರಕ್, ಕಾರಿಗೆ ಡಿಕ್ಕಿ ; ಸ್ಥಳದಲ್ಲೇ 6 ಮಂದಿ ಸಾವು –ಕಹಳೆ ನ್ಯೂಸ್

ವೇಗವಾಗಿ ಚಲಿಸುತ್ತಿದ್ದ ಟ್ರಕ್, ಕಾರಿಗೆ ಡಿಕ್ಕಿ ಹೊಡೆದ ಘಟನೆ ಫರಿದಾಬಾದ್–ಗುರುಗ್ರಾಮ ರಸ್ತೆಯಲ್ಲಿ ನಡೆದಿದೆ. ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿದ್ದು, ಮೃತರನ್ನು ಪುತಿನ್, ಜತಿನ್, ಆಕಾಶ್, ಸಂದೀಪ್, ಬಲ್ಜೀತ್ ಮತ್ತು ವಿಸಾಲ್ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಪಲವಲ್ ನಗರದವರಾಗಿದ್ದು, ಮಾರುತಿ ಆಲ್ಟೊ ಕಾರಿನಲ್ಲಿ ಗುರುಗ್ರಾಮದಿಂದ ಫರಿದಾಬಾದ್‌ಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. 6 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತದೇಹಗಳನ್ನು ಬಿ.ಕೆ. ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರೆಲ್ಲರೂ 18–25 ವರ್ಷ ವಯಸ್ಸಿನವರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ನೂ ಆರೋಪಿಯಾದ ಟ್ರಕ್ ಚಾಲಕ ಪರಾರಿಯಾಗಿದ್ದು, ಪೊಲೀಸರು ಆತನಿಗಾಗಿ ಶೋಧ ನಡೆಸುತ್ತಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು