ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ಧರಿಸಿ ಬರುವಂತಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. ಇದೇ ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ಧರಿಸಿ ಬರುವಂತಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಸೂಚಿಸಿದ್ದಾರೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ವಿವಿಧ ಜಿಲ್ಲೆಗಳಲ್ಲಿ ಕಾಲೇಜು ಪ್ರಾಂಶುಪಾಲರಿಗೆ ಮುಸ್ಲಿಂ ವಿದ್ಯಾರ್ಥಿನಿಯರು ಮನವಿ ಮಾಡಿದ್ದಾರೆ ಎಂದು ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ. ಹಾಗಾಗಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಪರೀಕ್ಷಾ ಕೇಂದ್ರಗಳಲ್ಲಿ ಹಿಜಾಬ್ಗೆ ನಿರ್ಬಂಧಿಸಲಾಗಿದ್ದು, ಹಿಜಾಬ್ ಧರಿಸಿ ಬರುವವರಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಿಜಾಬ್ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದ್ದು, ಹೀಗಾಗಿ ಪರೀಕ್ಷೆ ಸಮಯದಲ್ಲಿ ಹಿಜಾಬ್ ಅನುಮತಿಸುವ ಪ್ರಶ್ನೆಯೇ ಇಲ್ಲ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪಿಯು ಕಾಲೇಜು ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಹಿಜಾಬ್ ಅನುಮತಿಗೆ ಸಂಬಂಧಪಟ್ಟಂತಹ ಯಾವುದೇ ಮನವಿಗಳನ್ನು ಪರಿಗಣಿಸದಂತೆ ಸೂಚನೆ ನೀಡಿದ್ದಾರೆ.
You Might Also Like
ಪ್ರಯಾಗರಾಜ್ ಕುಂಭಮೇಳದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ‘ಹಿಂದೂ ಏಕತಾ ಪಾದಯಾತ್ರೆ’ -ಕಹಳೆ ನ್ಯೂಸ್
ಪ್ರಯಾಗರಾಜ - ಜನವರಿ 22, 2025 ಕ್ಕೆ ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮಲಲ್ಲನ ಪ್ರಾಣಪ್ರತಿಷ್ಠಾಪನೆಯಾಗಿ ಒಂದು ವರ್ಷ ಪೂರ್ಣವಾಯಿತು. ಈ ಶುಭ ಸಂದರ್ಭದಲ್ಲಿ, ಹಿಂದೂ ಜನಜಾಗೃತಿ...
ಅಯೋಧ್ಯೆಯ ರಾಮಮಂದಿರದ ಲೋಕಾರ್ಪಣೆಯ ವರ್ಷಾಚರಣೆ ; ಆರ್ಯಾಡಿಯ ಅಶ್ವಥಕಟ್ಟೆಯಲ್ಲಿ “ಭಜನಾ ಸಂಕೀರ್ತನೆ” -ಕಹಳೆ ನ್ಯೂಸ್
ಕಾಪು: ವಿಶ್ವಹಿಂದೂ ಪರಿಷದ್ ಬಜರಂಗದಳ ಪಾಂಗಾಳ ಘಟಕದ ನೇತೃತ್ವದಲ್ಲಿ ಅಯೋಧ್ಯೆಯ ರಾಮಮಂದಿರದ ಲೋಕಾರ್ಪಣೆಯ ವರ್ಷಾಚರಣೆಯ ದಿನದ ಅಂಗವಾಗಿ ಜನವರಿ 22ರಂದು ಆರ್ಯಾಡಿಯ ಅಶ್ವಥಕಟ್ಟೆಯಲ್ಲಿ "ಭಜನಾ ಸಂಕೀರ್ತನೆ" ನಡೆಯಿತು....
ಅಂಬಿಕಾ ವಿದ್ಯಾಲಯದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ರಂಗಪ್ರವೇಶ ಮಾತಿನಲ್ಲಿ ಹೇಳುವುದಕ್ಕಿಂತ ಕಾರ್ಯದಲ್ಲಿ ತೋರಬೇಕು : ದಂಬೆಕಾನ ಸದಾಶಿವ ರೈ -ಕಹಳೆ ನ್ಯೂಸ್
ಪುತ್ತೂರು: ಯಾವುದೇ ಕೆಲಸವನ್ನು ಮಾಡುತ್ತೇನೆಂದು ಬಾಯಿಯಲ್ಲಿ ಹೇಳುತ್ತಾ ಇರುವ ಬದಲಿಗೆ ಕೃತಿಯಲ್ಲಿ ಆಚರಿಸಿ ತೋರಿದಾಗ ವ್ಯಕ್ತಿತ್ವ ಬೆಳಗುತ್ತದೆ. ಹಾಗೆಂದು ನಾವು ಏನೇ ಸಾಧನೆ ಮಾಡಿದರೂ ಅದು ದೈವದ...
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಿಕೆಟ್ ತಂಡಕ್ಕೆ ಅನಘ.ಕೆ.ಎನ್ ಆಯ್ಕೆ-ಕಹಳೆ ನ್ಯೂಸ್
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿನಿ ಅನಘ.ಕೆ.ಎನ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಪ್ರಥಮ...