Friday, January 24, 2025
ಸುದ್ದಿ

ಕರಾವಳಿಯಲ್ಲಿ ಬಿಸಿ ಗಾಳಿ ಬೀಸುವ ಆತಂಕ ; ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ –ಕಹಳೆ ನ್ಯೂಸ್

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಿತ ಕರಾವಳಿ ಕರ್ನಾಟಕ ಭಾಗದಲ್ಲಿ ಮುಂದಿನ 48 ಗಂಟೆಗಳಲ್ಲಿ ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ತೀವ್ರ ಬಿಸಿಲಿನ ವಾತಾವರಣವಿದ್ದು, ಬೇಸಿಗೆಯ ಆರಂಭದಲ್ಲಿಯೇ ವಾಡಿಕೆಗಿಂತ ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ.

ಮಾರ್ಚ್ ಮೂರನೇ ವಾರದವರೆಗೆ ಗರಿಷ್ಟ ಉಷ್ಣಾಂಶ ಮುಂದುವರಿಯುವ ಸಾಧ್ಯತೆ ಇದೆ. ಅಲ್ಲದೆ ಈ ಅವಧಿಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರುವ ಸಾಧ್ಯತೆಗಳಿದ್ದು, ಜನರ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಹಿಟ್‌ಸ್ಟ್ರೋಕ್, ಕಣ್ಣಿನ ಉರಿ, ತಲೆಸುತ್ತು ಸಹಿತ ನಾನಾ ಆರೋಗ್ಯ ಸಮಸ್ಯೆಗಳು ತಲೆದೋರುವ ಅಪಾಯವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.