ನವದೆಹಲಿ (ಪಿಟಿಐ): ಆಸ್ಟ್ರೇಲಿಯಾ ಪ್ರಧಾನಿ ಆ್ಯಂಟನಿ ಅಲ್ಬನೀಸ್ ಅವರು ನಾಲ್ಕು ದಿನಗಳ ಭೇಟಿಗಾಗಿ ಇದೇ 8ರಂದು ಭಾರತಕ್ಕೆ ಬರಲಿದ್ದಾರೆ. ಎರಡೂ ರಾಷ್ಟ್ರಗಳ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಹಿನ್ನೆಲೆಯಲ್ಲಿ ಅವರು ಭಾರತದ ಪ್ರವಾಸ ಕೈಗೊಳ್ಳಲಿದ್ದಾರೆ. 2017ರ ಬಳಿಕ ಆಸ್ಟ್ರೇಲಿಯಾ ಪ್ರಧಾನಿಯೊಬ್ಬರು ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ‘ಭಾರತದೊಂದಿಗಿನ ನಮ್ಮ ಬಾಂಧವ್ಯ ಬಲವಾಗಿದೆ. ಆದರೆ ಅದನ್ನು ಇನ್ನೂ ಗಟ್ಟಿಗೊಳಿಸಬಹುದು’ ಎಂದು ಅಲ್ಬನೀಸ್ ಅವರು ಶನಿವಾರ ಹೇಳಿದ್ದಾರೆ. ‘ನವದೆಹಲಿಯಲ್ಲಿ ನಡೆಯಲಿರುವ ಭಾರತ– ಆಸ್ಟ್ರೇಲಿಯಾ ವಾರ್ಷಿಕ ನಾಯಕರ ಶೃಂಗಸಭೆಯಲ್ಲಿ ಅಲ್ಬನೀಸ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಅಲ್ಬನೀಸ್ ಅವರು ಮೋದಿ ಅವರೊಂದಿಗೆ, ಅಹಮದಾಬಾದ್ನಲ್ಲಿ ನಡೆಯಲಿರುವ ಬಾರ್ಡರ್– ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯವನ್ನು ವೀಕ್ಷಿಸಲಿದ್ದಾರೆ’ ಎಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಕಚೇರಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
You Might Also Like
ದಕ್ಷಿಣ ಕನ್ನಡ ಜಿಲ್ಲಾಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಪ್ರದರ್ಶನ ,ಮಾರಾಟ ಮತ್ತು ಇತರ ಮಳಿಗೆಗಳಿಗೆ ಅವಕಾಶ -ಕಹಳೆ ನ್ಯೂಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಇದೇ ಬರುವ ಫೆಬ್ರವರಿ 21 ಮತ್ತು 22ರಂದು ಮಂಗಳೂರು ವಿಶ್ವವಿದ್ಯಾನಿಲಯದ, ಮಂಗಳ ಸಭಾಂಗಣದಲ್ಲಿ ಡಾ.ಪ್ರಭಾಕರ ಶಿಶಿಲ...
ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡಬಿದ್ರೆ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ – ಕಹಳೆ ನ್ಯೂಸ್
ಮೂಡಬಿದ್ರೆ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡಬಿದ್ರೆ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ರಸ್ತೆ ಸುರಕ್ಷತಾ ಅಭಿಯಾನ. ಕಾರ್ಯಕ್ರಮ ಮೂಡಬಿದ್ರೆ ಪೊಲೀಸರ ಸಹಕಾರದೊಂದಿಗೆ ನಡೆಯಿತು. ಕಾರ್ಯಕ್ರಮವನ್ನು ಮುಖ್ಯ...
ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ದೀಕ್ಷಿತ್ ಕುಮಾರ್ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ-ಕಹಳೆ ನ್ಯೂಸ್
ಪುತ್ತೂರು : ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ವತಿಯಿಂದ ಜುಲೈ-ಆಗಸ್ಟ್ 2024ರಲ್ಲಿ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್...
ಮಗಳ ಹುಟ್ಟುಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿದ ಉದ್ಯಮಿ ಲ| ಗಣೇಶ್ ಪೂಜಾರಿ-ಕಹಳೆ ನ್ಯೂಸ್
ಬಂಟ್ವಾಳ : ಹುಟ್ಟು ಹಬ್ಬದ ಆಚರಣೆಯಲ್ಲೂ ಪಾಶ್ಚ್ಯಾತ್ಯ ಸಂಸ್ಕೃತಿಯು ಆವರಿಸಿಕೊಂಡಿರುವ ಕಾಲಘಟ್ಟ ವಿದು. ಆಪ್ತೇಷ್ಟರನ್ನು ಕರೆದು ವೈಭವೋಪೇತವಾಗಿ ಹುಟ್ಟು ಹಬ್ಬವನ್ನು ಆಚರಿಸುವುದು ಎಲ್ಲಾ ಕಡೆಯೂ ಪ್ರಚಲಿತದಲ್ಲಿದೆ. ಆದರೆ...