ದಿನದಿಂದ ದಿನಕ್ಕೆ ಬಿಸಿಲಿನ ಬೇಗೆ ಹೆಚ್ಚುತ್ತಿದ್ದು ಅಲ್ಲಲ್ಲಿ, ಬೆಂಕಿ ಅವಘಡಗಳು ಸಂಭವಿಸ್ತಾ ಇದೆ. ಚಾಮುಂಡಿ ಬೆಟ್ಟದ ನಂದಿ ವಿಗ್ರಹದ ಪಕ್ಕದಲ್ಲಿರುವ ಕುರುಚಲು ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು.
ಬೆಟ್ಟಗಳ ಮೇಲಿನ ಒಣ ಹುಲ್ಲಿಗೆ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಚಾಮುಂಡಿ ಬೆಟ್ಟದ ನಿವಾಸಿಗಳು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅರಣ್ಯ ಸಿಬ್ಬಂದಿಯೊAದಿಗೆ ಸ್ಥಳಕ್ಕಾಗಮಿಸಿದ ಅಧಿಕಿಕಾರಿಗಳು, ಸುಮಾರು ೧೦ ಎಕರೆ ಬೆಟ್ಟದವರೆಗೆ ಹರಡಿದ್ದ ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟಿದ್ದಾರೆ. ಸುಮಾರು ನಾಲ್ಕು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.