Friday, January 24, 2025
ಸುದ್ದಿ

ಉಗ್ರ ಕೃತ್ಯಗಳಿಗೆ ಜಿಹಾದಿಗಳಿಂದ ಹಣಕಾಸಿನ ನೆರವು ; ದ.ಕ ಜಿಲ್ಲೆಯ ಹಲವು ಜಿಹಾದಿ ಮನೆಗಳಿಗೆ ಎನ್ ಐ ಎ ದಾಳಿ -ಕಹಳೆ ನ್ಯೂಸ್ 

ಬಿಹಾರದ ಪಟ್ನಾದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಬಾಂಬ್ ಇರಿಸಲು ಯತ್ನಿಸಿ ಬಂಧಿತರಾದ ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಎನ್ ಐ ಎ ಬಂಟ್ವಾಳ, ಪುತ್ತೂರಿನಲ್ಲಿ ಹಲವು ಮನೆಗಳಿಗೆ ದಾಳಿ ನಡೆಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪಾಟ್ನಾದ ಕಾರ್ಯಕ್ರಮವನ್ನು ವಿಫಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಬಾಂಬ್ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ಒದಗಿಸಿದ ಬಂಟ್ವಾಳ ಮೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ತಂಡ ದಾಳಿ ನಡೆಸಿ ತನಿಖೆ ನಡೆಸುತ್ತಿದೆ.

ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್ ಮನೆಗೆ ದಾಳಿ ನಡೆದಿದ್ದು, ಈ ಅರೋಪಿಗಳು ಪಾಟ್ನಾ ದ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ಭಯೋತ್ಪಾದಕರ ಜೊತೆ ಸಂಪರ್ಕ ಹೊಂದಿ ಹಣಕಾಸಿನ ನೆರವು ಒದಗಿಸಿದ್ದಾರೆ ಎಂಬ ಆರೋಪದಲ್ಲಿ ದಾಳಿ ನಡೆದಿದೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರ ವಿವಿಧ ಖಾತೆಗಳಿಗೆ ಕೋಟ್ಯಾಂತರ ರೂಪಾಯಿ ಹಣದ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಇವರ ಮೇಲಿದ್ದು, ಈ ಹಿನ್ನೆಲೆಯಲ್ಲಿ ಎನ್.ಐ.ಎ ತಂಡ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ ಎನ್ನಲಾಗಿದೆ.