Friday, January 24, 2025
ಸುದ್ದಿ

ಎನ್‌ಐಎ ಅಧಿಕಾರಿಗಳ ವಾಹನ ಹಾಗೂ ಬೈಕ್ ನಡುವೆ ಅಪಘಾತ : ಬೈಕ್ ಸವಾರ ಲಕ್ಷ್ಮಣ ನಾಯ್ಕ ಬಿ ಸ್ಧಳದಲ್ಲೆ ಸಾವು – ಕಹಳೆ ನ್ಯೂಸ್

ಪುತ್ತೂರು : ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ನಡೆದು ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೈಕ್ ಸವಾರ, ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿಯಾಗಿರುವ ಲಕ್ಷ್ಮಣ ನಾಯ್ಕ ಬಿ.(50) ಎಂಬವರ ಬೈಕ್‌ಗೆ ಮಾಣಿ ಮೈಸೂರು ರಸ್ತೆಯ ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ, ಭಾನುವಾರ ರಾತ್ರಿ ವಿಶೇಷ ತನಿಖೆಯ ದೃಷ್ಠಿಯಿಂದ ಸಂಚರಿಸುತ್ತಿದ್ದ ಎನ್. ಐ. ಎ. ತಂಡದ ಪೊಲೀಸ್ ವಾಹನ ಡಿಕ್ಕಿ ಹೊಡೆಡಿದೆ. ಅಪಘಾತದಲ್ಲಿ ಲಕ್ಷ್ಮಣ ಅವರು ಸ್ಧಳದಲ್ಲೆ ಮೃತಪಟ್ಟಿದ್ದಾರೆ.

ಬಿಜೆಪಿಯ ಯೂರ್ವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಕೊಲೆ ಪ್ರಕರಣ ಸಂಬAಧ ಎನ್‌ಐಎ ಅಧಿಕಾರಿಗಳ ತಂಡ ಪುತ್ತೂರಿಗೆ ಆಗಾಗ ಆಗಮಿಸುತ್ತದೆ. ಆಗ ರಾಜ್ಯ ಪೊಲೀಸ್ ವಾಹನವನ್ನು ಅವರ ಸಂಚಾರಕ್ಕೆ ಬಳಸಿಕೊಳ್ಳಲಾಗುತ್ತದೆ ಎಂಬ ಮಾಹಿತಿ ಲಭಿಸಿದೆ. ಇನ್ನು ಈ ಅಪಘಾತದ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.