Friday, January 24, 2025
ಸುದ್ದಿ

‘ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟಿಸಿದ್ದು ನಾವೇ’ – ಹೊಣೆ ಹೊತ್ತ ಐಸಿಸ್ ಉಗ್ರ ಸಂಘಟನೆ -ಕಹಳೆ ನ್ಯೂಸ್

ಮಂಗಳೂರು: ಇಡೀ ದೇಶವನ್ನೆ ಬೆಚ್ಚಿ ಬೀಳಿಸಿದ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಹೊಣೆಯನ್ನ ಕೊನೆಗೂ ಐಸಿಸ್ ಉಗ್ರ ಸಂಘಟನೆ ಹೊತ್ತಿದೆ. ಐಸಿಸ್ ಸಂಘಟನೆಯ ವಕ್ತಾರ ಐಎಸ್‌ಕೆಪಿ ನಡೆಸುವ ವಾಯ್ಸ್ ಆಫ್ ಕೂರಸ ಮ್ಯಾಗಜೀನ್‌ನಲ್ಲಿ ರ‍್ನಾಟಕದ ಮಂಗಳೂರು ಮತ್ತು ತಮಿಳುನಾಡಿನ ಕೊಯಮತ್ತೂರು ಸ್ಪೋಟದ ಹೊಣೆ ಹೊತ್ತಿರುವ ಕುರಿತಾಗಿ ಪ್ರಕಟಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇತ್ತೀಚೆಗೆ ಶಂಕಿತ ಉಗ್ರ ಶಾರೀಕ್‌ನನ್ನು ಬೆಂಬಲಿಸಿ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿತ್ತು. ಶಂಕಿತ ಉಗ್ರ ಶಾರೀಕ್ ನಮ್ಮ ಸಹೋದರ. ಮಂಗಳೂರಿನ ಕದ್ರಿ ದೇವಾಲಯದ ಮೇಲೆ ದಾಳಿಗೆ ಯತ್ನಿಸಲಾಗಿತ್ತು. ಮಂಗಳೂರು ಕೇಸರಿ ಭಯೋತ್ಪಾದಕರ ಭದ್ರಕೋಟೆಯಾಗಿದೆ. ಈ ಕರ‍್ಯಾಚರಣೆಯ ನಮ್ಮ ಉದ್ದೇಶ ಈಡೇರದಿದ್ದರೂ ರಾಜ್ಯ, ಕೇಂದ್ರ ಗುಪ್ತಚರ ಸಂಸ್ಥೆಗಳ ಕಣ್ತಪ್ಪಿಸಿ ಮುಂದಿನ ದಿನಗಳಲ್ಲಿ ಮತ್ತೆ ದಾಳಿ ನಡೆಸಲಾಗುವುದು ಎಂದು ಬೆದರಿಕೆ ಹಾಕಿದ್ದರು.

2022ರ ನವೆಂಬರ್ 19 ರ ಬೆಳಗ್ಗೆ ಮೈಸೂರಿನಿಂದ ಮಂಗಳೂರಿನ ಕದ್ರಿ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಸ್ಪೋಟಿಸಲೆಂದೇ ತಾನು ತಯಾರಿಸಿದ್ದ ಕುಕ್ಕರ್ ಬಾಂಬ್ ಸಮೇತ ಮಂಗಳೂರಿನ ಕೆ.ಎಸ್.ಆರ್.ಟಿ.ಸಿ ಬಸ್‌ಗೆ ಹತ್ತಿ ಮಂಗಳೂರಿನ ಪಡೀಲಿನಲ್ಲಿ ಇಳಿದಿದ್ದ. ನಂತರ ಪಂಪ್‌ವೆಲ್ ಕಡೆ ನಡೆದುಕೊಂಡು ಬಂದಿದ್ದ. ರ‍್ಧ ದಾರಿಯಲ್ಲಿ ಪಂಪ್‌ವೆಲ್‌ಗೆ ಎಂದು ರಿಕ್ಷಾವೊಂದಕ್ಕೆ ಹತ್ತಿದ. ಆದರೆ ರಿಕ್ಷಾ ಕಂಕನಾಡಿ ಗರೋಡಿ ಬಳಿ ತಲುಪುತ್ತಿದ್ದಂತೆ ಬ್ಲಾಸ್ಟ್ ಆಗಿತ್ತು.

ಈ ಘಟನೆಯಲ್ಲಿ ಶಾರೀಕ್ ಹಾಗೂ ಆಟೋ ಡ್ರೈವರ್ ಪುರುಷೋತ್ತಮ ಪೂಜಾರಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಶಾರೀಕ್ ಎನ್‌ಐಎ ವಶದಲ್ಲಿದ್ದು, ಪುರುಷೋತ್ತಮ ಪೂಜಾರಿ ಆರೋಗ್ಯ ಚೇತರಿಕೆ ಕಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.