Friday, November 22, 2024
ಸುದ್ದಿ

ಯೂಟ್ಯೂಬ್ ವಿಡಿಯೋ ನೋಡಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ; ನವಜಾತ ಶಿಶುವಿನ ಕೊಲೆ –ಕಹಳೆ ನ್ಯೂಸ್

ಅಪ್ರಾಪ್ತ ಬಾಲಕಿಯೊಬ್ಬಳು ಯೂಟ್ಯೂಬ್ ವಿಡಿಯೋವನ್ನು ನೋಡಿ ಮಗುವಿಗೆ ಜನ್ಮ ನೀಡಿ ಬಳಿಕ ಶಿಶುವಿನ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆಕೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸಕ್ರಿಯವಾಗಿರುವುದರಿಂದ ಮಾಧ್ಯಮದಲ್ಲಿ ರಮೇಶ್ ಠಾಕೂರ್ ಎಂಬ ವ್ಯಕ್ತಿಯ ಪರಿಚಯವಾಗಿದ್ದಾನೆ . ಪರಿಚಯ ಕ್ರಮೇಣ ಪ್ರೀತಿಗೆ ತಿರುಗಿ, ಅವರಿಬ್ಬರು ಭೇಟಿಯಾಗಲು ಪ್ರಾರಂಭಿಸುತ್ತಾರೆ.

ಒಂದು ದಿನ ೧೫ ವರ್ಷದ ಅಪ್ರಾಪ್ತ ಹುಡುಗಿಯನ್ನು ಪ್ರೇರೇಪಿಸುವ ಮೂಲಕ, ಅವನು ಅವಳೊಂದಿಗೆ ಬಲವಂತವಾಗಿ ದೈಹಿಕ ಸಂಬ0ಧವನ್ನು ಹೊಂದಿದ್ದು, ಇದರಿಂದಾಗಿ ಅವಳು ಗರ್ಭಿಣಿಯಾಗಿದ್ದಾಳೆ.

ತನಗೆ ಕೆಲವು ಆರೋಗ್ಯ ಸಮಸ್ಯೆಗಳಿವೆ ಎಂದು ಕುಟುಂಬ ಸದಸ್ಯರಿಗೆ ಗೊತ್ತಾಗದಂತೆ ಬಾಲಕಿ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದು, ಆಕೆ ಗರ್ಭಿಣಿಯಾಗಿದ್ದು ಯಾರಿಗೂ ತಿಳಿದಿರಲಿಲ್ಲ. ಮಾ.3ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೋವು ಕಾಣಿಸಿಕೊಂಡಿದ್ದು, ಯೂಟ್ಯೂಬ್ ವೀಡಿಯೋಗಳ ಸಹಾಯದಿಂದ ಮನೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ನವಜಾತ ಶಿಶುವನ್ನು ಕತ್ತು ಹಿಸುಕಿ ಸಾಯಿಸಿದ್ದಾಳೆ.