Monday, January 20, 2025
ಸುದ್ದಿ

ಡ್ರಗ್ ಮಾಫಿಯಾ ಸುದ್ದಿ ಬಿತ್ತರಿಸಿದ್ದೇ ತಪ್ಪಾ..? : ಕೊಚ್ಚಿ ಏಷ್ಯಾನೆಟ್ ನ್ಯೂಸ್ ಚಾನೆಲ್ ಕಚೇರಿಗೆ ಎಸ್‍ಎಫ್‍ಐ ಗೂಂಡಾಗಳಿಂದ ದಾಳಿ – ಕಹಳೆ ನ್ಯೂಸ್

ಕೊಚ್ಚಿಯ ಏಷ್ಯಾನೆಟ್ ನ್ಯೂಸ್ ಚಾನೆಲ್ ಕಚೇರಿಗೆ ನುಗ್ಗಿ ಎಸ್‍ಎಫ್‍ಐ ಗೂಂಡಾಗಳು ದಾಳಿ ಮಾಡಿ, ಮಾಧ್ಯಮದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ತಕ್ಕೆ ತಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಡ್ರಗ್ ಮಾಫಿಯಾಕ್ಕೆ ಸಂಬಂಧಿಸಿದಂತೆ ಸುಳ್ಳು ವರದಿ ಮಾಡಿದ್ದಾರೆ ಎಂದು ಆರೋಪಿಸಿ ಎಸ್‍ಎಫ್‍ಐ ಗೂಂಡಾಗಳು ನ್ಯೂಸ್ ಚಾನೆಲ್ ಕಚೇರಿಗೆ ನುಗ್ಗಿ, ಕಚೇರಿ ಸಿಬ್ಬಂದಿಯನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದರು. ಎಸ್‍ಎಫ್‍ಐ ಜಿಲ್ಲಾ ಕಾರ್ಯದರ್ಶಿ ಅರ್ಜುನ್ ಬಾಬು ನೇತೃತ್ವದಲ್ಲಿ ಎಸ್‍ಎಫ್‍ಐ ಕಾರ್ಯಕರ್ತರು ಜನವರಿ 3 ರಂದು ಸಂಜೆ ಕೊಚ್ಚಿಯಲ್ಲಿರುವ ಏಷ್ಯಾನೆಟ್ ಕಚೇರಿಗೆ ನುಗ್ಗಿದ್ರು. ಇದೀಗ ಎಸ್‍ಎಫ್‍ಐ ಜಿಲ್ಲಾ ಕಾರ್ಯದರ್ಶಿ ಅರ್ಜುನ್ ಬಾಬು ಪೊಲೀಸರಿಗೆ ಶರಣಾಗಿದ್ದಾನೆ.

ಮಲೆಯಾಳಂ ಏಷ್ಯಾನೆಟ್ ನ್ಯೂಸ್ ಚಾನೆಲ್ ಡ್ರಗ್ ಮಾಫಿಯಾ ಬಗ್ಗೆ ನವೆಂಬರ್ 10, 2022 ರಂದು ‘ನಾರ್ಕೋಟಿಕ್ಸ್ ಎ ಡರ್ಟಿ ಬಿಸಿನೆಸ್’ ಎಂಬ ಸರಣಿ ಕಾರ್ಯಕ್ರಮವನ್ನು ಪ್ರಸಾರ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ಸಂತ್ರಸ್ತೆ 14 ವರ್ಷದ ಬಾಲಕಿಯ ಹೇಳಿಕೆಯನ್ನು ಮರುಸೃಷ್ಟಿಸುವ ಸಲುವಾಗಿ ಬೇರೊಂದು ಬಾಲಕಿಯನ್ನು ಬಳಸಿಕೊಳ್ಳಲಾಗಿತ್ತು. ಇದನ್ನೇ ಎಸ್‍ಎಫ್‍ಐ ಕಾರ್ಯಕರ್ತರೂ ಇದೊಂದು ಫೇಕ್‍ನ್ಯೂಸ್ ಎಂದು ಆರೋಪಿಸಿ ಶುಕ್ರವಾರ ಸಂಜೆ ಕೊಚ್ಚಿ ಏಷ್ಯಾನೆಟ್ ನ್ಯೂಸ್ ಕಚೇರಿಗೆ ನುಗ್ಗಿ ಗೂಂಡಾಗಳಂತೆ ವರ್ತಿಸಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನು ಬೆದರಿಸಿದ್ದರು. ಈ ಬಗ್ಗೆ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.. ಇದಾದ ಬಳಿಕ ಪಕ್ಷೇತರ ಶಾಸಕ ಪಿಸಿ ಅನ್ವರ್ ನೀಡಿದ ಸುಳ್ಳು ದೂರಿನ ಮೇರೆಗೆ ಭಾನುವಾರ ಬೆಳಗ್ಗೆ ಕೋಳಿಕ್ಕೋಡ್‍ನಲ್ಲಿರುವ ಏಷ್ಯಾನೆಟ್ ನ್ಯೂಸ್ ಕಚೇರಿಗೆ ಪೊಲೀಸರು ದಾಳಿ ನಡೆಸಿದ್ದರು.

ಕೋಳಿಕ್ಕೋಡ್‍ನಲ್ಲಿರುವ ಏಷ್ಯಾನೆಟ್ ನ್ಯೂಸ್ ಚಾನೆಲ್ ಮೇಲೆ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿರುವುದರ ಹಿಂದೆ ತೀವ್ರ ರಾಜಕೀಯ ಒತ್ತಡವಿರುವುದು ತಿಳಿದು ಬಂದಿದೆ. ಈ ಶೋಧನೆಯ ಹಿಂದೆ ಉನ್ನತ ಮಟ್ಟದ ರಾಜಕೀಯ ಒತ್ತಡ, ಗೃಹ ಇಲಾಖೆಯ ಉನ್ನತಾಧಿಕಾರಿಗಳ ತೀವ್ರ ಒತ್ತಡದಿಂದಾಗಿ ಕೋಳಿಕ್ಕೋಡ್ ನಗರ ಪೊಲೀಸರು ಕಾನೂನು ಕ್ರಮಗಳ ಗಣನೆಗೆ ತೆಗೆದುಕೊಳ್ಳದೇ ಚಾನೆಲ್‍ನ ಪ್ರಾದೇಶಿಕ ಕಚೇರಿಯಲ್ಲಿ ತಪಾಸಣೆ ನಡೆಸಿದ್ದಾರೆ ಎಮದು ತಿಳಿದು ಬಂದಿದೆ.

ಮಾಧ್ಯಮ ಸಂಸ್ಥೆ ಕಚೇರಿ ಪ್ರವೇಶ ಮಾಡಿ, ಪೊಲೀಸರು ಶೋಧಿಸಿದ ಕ್ರಮಕ್ಕೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಬಾಯಿ ಮುಚ್ಚಿಸಿ ಜನರಿಂದ ಸತ್ಯ ಬಚ್ಚಿಡುವ ಕೆಲಸವಾಗ್ತಾ ಇದೆ ಎಂದು ಅನೇಕರು ಆರೋಪಿಸಿದ್ದಾರೆ.