Recent Posts

Monday, January 20, 2025
ಸುದ್ದಿ

ಬಂಟ್ವಾಳ ಜಾಗದ ವಿಜಾರದಲ್ಲಿ ಹಲ್ಲೆ. : ಒಂದು ವರ್ಷ ವೇತನ ಇಲ್ಲದೆ ದುಡಿಯುವಂತೆ ಕೋರ್ಟ್ ಆದೇಶ : ವೃದ್ಯಾಪ್ಯದಲ್ಲೊಂದು ಮನಕಲುಕುವ ವ್ಯಥೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ನಿವಾಸಿ ಐತಪ್ಪ ನಾಯ್ಕ ಅವರದ್ದು ಬಡ ಕುಟುಂಬ. 2008ರಲ್ಲಿ ಜಾಗದ ವಿಚಾರದಲ್ಲಿ ನೆರೆಮನೆಯ ವ್ಯಕ್ತಿಯೊಬ್ಬರಿಗೆ ಐತಪ್ಪ ನಾಯ್ಕ ಹಲ್ಲೆ ಮಾಡಿದ್ದರು. ಪ್ರಕರಣದಲ್ಲಿ ಬಂಟ್ವಾಳದ ಕೋರ್ಟ್, ಆರೋಪಿ ಐತಪ್ಪ ನಾಯ್ಕರಿಗೆ ಮೂರು ದಿನಗಳ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ದಂಡ ವಿಧಿಸಿತ್ತು. ಆದರೆ ದೂರುದಾರ ವ್ಯಕ್ತಿ ಆರೋಪಿಗೆ ಶಿಕ್ಷೆಯ ಪ್ರಮಾಣ ಹೆಚ್ಚಿಸಬೇಕೆಂದು ಮಂಗಳೂರಿನ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ 2014ರಲ್ಲಿ ಆರೋಪಿ ಐತಪ್ಪ ನಾಯ್ಕನಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿ ತೀರ್ಪು ಕೊಟ್ಟಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಐತಪ್ಪ ನಾಯ್ಕ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಮಕ್ಕಳಿಲ್ಲದ ವೃದ್ಧ ಮತ್ತು ಮನೆಯಲ್ಲಿ ಪತ್ನಿ ಒಬ್ಬಂಟಿಯಾಗಿರುವುದರಿಂದ ವಯಸ್ಸನ್ನು ನೋಡಿ ಶಿಕ್ಷೆಗೆ ವಿನಾಯ್ತಿ ನೀಡಬೇಕೆಂದು ವಕೀಲರು ಕೋರಿದ್ದರು. ಆರೋಪಿ ಐತಪ್ಪ ನಾಯ್ಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಲ್ಲದೆ, ಪಶ್ಚಾತ್ತಾಪ ವ್ಯಕ್ತಪಡಿಸಿದ್ದರಿಂದ ನ್ಯಾಯಾಧೀಶರು ಕೆಳಗಿನ ಕೋರ್ಟಿನ ಶಿಕ್ಷೆಯನ್ನು ರದ್ದುಗೊಳಿಸಿದ್ದಾರೆ. ಅದರ ಬದಲಿಗೆ ಒಂದು ವರ್ಷ ಕಾಲ ಸ್ಥಳೀಯ ಅಂಗನವಾಡಿಯಲ್ಲಿ ವೇತನ ಇಲ್ಲದೆ ಸೇವೆ ಮಾಡುವಂತೆ ಆದೇಶ ಮಾಡಿದ್ದಾರೆ. ಅದರಂತೆ, ಕರೋಪಾಡಿ ಗ್ರಾಮದ ಅಂಗನವಾಡಿಯಲ್ಲಿ ವೃದ್ಧ ಐತಪ್ಪ ನಾಯ್ಕ ಈಗ ಶುಚಿತ್ವದ ಕೆಲಸ ಆರಂಭಿಸಿದ್ದಾರೆ.
ಐತಪ್ಪ ನಾಯ್ಕನಿಗೆ ಬಂಟ್ವಾಳದ ವಕೀಲರೊಬ್ಬರು ಸಹಾಯ ಹಸ್ತ ನೀಡಿದ್ದು, ಹೈಕೋರ್ಟಿನಲ್ಲಿ ವಾದಿಸಿ ನ್ಯಾಯ ದೊರಕಿಸಿದ್ದಾರೆ. ಇಳಿ ವಯಸ್ಸಿನಲ್ಲಿ ಜೈಲು ಸೇರುವ ಬದಲು ಮನೆ ಬಳಿಯಲ್ಲೇ ಅಂಗನವಾಡಿ ಸೇವೆಗೆ ಜೋಡಿಸುವ ಕೆಲಸ ಮಾಡಿದ್ದಾರೆ.