ಬೆಂಗಳೂರು : ಮಾರ್ಚ್ 9 ರ ನಾಳೆಯಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಈ ಪರೀಕ್ಷೆಗೆ ಹಿಜಾಬ್ ಸೇರಿದಂತೆ ಯಾವುದೇ ಧರ್ಮಧಾರಿತ ಉಡುಪು ಧರಿಸಿ ಬಂದರೆ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ನಾಳೆಯಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ ಸಿದ್ಧತೆ ಕೈಗೊಂಡಿದೆ. 1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 7,26,213 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಹೊಸದಾಗಿ 6.29 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 25,847 ಖಾಸಗಿ, 70,586 ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. 3,62,509 ಬಾಲಕಿಯರು, ಮತ್ತು 3,63,704 ಬಾಲಕರು ಸೇರಿದ್ದಾರೆ. ಕಲಾ ವಿಭಾಗದಿಂದ 2,34,815, ವಾಣಿಜ್ಯದಲ್ಲಿ 2,47,269 ಮತ್ತು ವಿಜ್ಞಾನ ವಿಭಾಗದಿಂದ 2,44,129 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದ್ರೆ ನೋ ಎಂಟ್ರಿ!
ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದ್ರೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಇಲ್ಲ . ಮಾರ್ಚ್ 9 ರಿಂದ ಮಾರ್ಚ್ 29 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಎಸ್‌ಎಸ್ ಎಲ್ ಸಿ ಮಾದರಿಯಲ್ಲೇ ನಡೆಸಲಾಗುವುದು. ರಾಜ್ಯದ ಶೇ. 90 ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರ ಇದೆ. ಶೇ. 10 ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರ ಇಲ್ಲ. ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಯಾವುದೇ ಧರ್ಮ ಸೂಚನೆ ವಸ್ತ್ರ ಧರಿಸಿ ಬರುವಂತಿಲ್ಲ ಎಂದು ಶಿಕ್ಷಣ ಇಲಾಖೆ ಹೇಳಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವವರಿಗೆ KSRTC-BMTC ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ(2nd PUC Exam)ಗಳು ಶುರುವಾಗಲಿದ್ದು, ಈ ನಿಟ್ಟಿನಲ್ಲಿ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿ ನೀಡಿದ್ದ ಮನವಿಗೆ ಕೆಎಸ್‌ಆರ್‌ಟಿಸಿ ( KSRTC) ಮತ್ತು ಬಿಎಂಟಿಸಿ (BMTC) ಒಪ್ಪಿ ಸುತ್ತೋಲೆ ಹೊರಡಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗಳ ಕೇಂದ್ರಗಳ ಹೊರತಾಗಿ ಬೇರೆ ಸ್ಥಳಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಲಭ್ಯವಾಗಲಿದೆ. ಈ ಹಿಂದೆಯೇ ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯು ಉಚಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಸೇವೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮನವಿ ಮಾಡಿತ್ತು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಸೇವೆ ಲಭ್ಯವಾಗಲಿದೆ.
ಅಷ್ಟೇ ಅಲ್ಲದೆ ಪರೀಕ್ಷಾ ದಿನ ಸಂಚರಿಸುವಾಗಿ ಬಸ್ ನಿರ್ವಾಹಕರಿಗೆ ಪರೀಕ್ಷೆಯ ಪ್ರವೇಶ ಪತ್ರ ತೋರಿಸುವುದು ಕಡ್ಡಾಯ ಮಾಡಲಾಗಿದೆ. ಇನ್ನೂ ಈ ಕುರಿತಂತೆ ಚಾಲಕ ಮತ್ತು ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡುವಂತೆ ನಿಗಮ ಸಲಹೆ ಸೂಚನೆಯನ್ನು ನೀಡಲಾಗಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ
• ದಿನಾಂಕ 09-03-2023, ಗುರುವಾರ – ಕನ್ನಡ, ಅರೇಬಿಕ್
• ದಿನಾಂಕ 11-03-2023, ಶನಿವಾರ – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
• ದಿನಾಂಕ 13-03-2023, ಸೋಮವಾರ – ಅರ್ಥಶಾಸ್ತ್ರ
• ದಿನಾಂಕ 14-03-2023, ಮಂಗಳವಾರ – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
• ದಿನಾಂಕ 15-03-2023, ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
• ದಿನಾಂಕ 16-03-2023, ಗುರುವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
• ದಿನಾಂಕ 17-03-2023, ಶುಕ್ರವಾರ – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
• ದಿನಾಂಕ 18-03-2023, ಶನಿವಾರ – ಭೂಗೋಶಶಾಸ್ತ್ರ, ಜೀವಶಾಸ್ತ್ರ
• ದಿನಾಂಕ 20-03-2023, ಸೋಮವಾರ – ಇತಿಹಾಸ, ಭೌತಶಾಸ್ತ್ರ
• ದಿನಾಂಕ 21-03-2023, ಮಂಗಳವಾರ – ಹಿಂದಿ
• ದಿನಾಂಕ 23-03-2023, ಗುರುವಾರ – ಇಂಗ್ಲೀಷ್
• ದಿನಾಂಕ 25-03-2023 ಶನಿವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
• ದಿನಾಂಕ 27-03-2023, ಸೋಮವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
• ದಿನಾಂಕ 29-03-2023, ಬುಧವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ