ಮಾ.11ರಂದು ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ (ರಿ.) ನೇರಳಕಟ್ಟೆಯ ದಶ ಸಂಭ್ರಮ ಪ್ರಯುಕ್ತ ಪ್ರೊ ಮಾದರಿಯ ಮ್ಯಾಟ್ ಕಬಡ್ಡಿ ಪಂದ್ಯಾಟ ಮತ್ತು ವಾಲಿಬಾಲ್ ಪಂದ್ಯಾಟ – ಕಹಳೆ ನ್ಯೂಸ್
ನೇರಳಕಟ್ಟೆ : ಮಾ. 11ರಂದು ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ (ರಿ.) ನೇರಳಕಟ್ಟೆಯ ದಶ ಸಂಭ್ರಮದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 65 ಕೆಜಿ ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಪ್ರೊ ಮಾದರಿಯ ಮ್ಯಾಟ್ ಕಬಡ್ಡಿ ಪಂದ್ಯಾಟ ಮತ್ತು ವಾಲಿಬಾಲ್ ಪಂದ್ಯಾಟವು ನೇರಳಕಟ್ಟೆ ರೈಲ್ವೆ ನಿಲ್ದಾಣದ ಬಳಿಯ ನೇತಾಜಿ ನಗರದಲ್ಲಿ ನಡೆಯಲಿದೆ.
ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ (ರಿ.)ನ ಅಧ್ಯಕ್ಷರಾದ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮವನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಉದ್ಘಾಟಿಸಲಿದ್ದಾರೆ.
ಇನ್ನು ಮುಖ್ಯ ಅತಿಥಿಗಳಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದೇವದಾಸ ಶೆಟ್ಟಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಉದ್ಯಮಿ ಜಗದೀಶ್ ಗೌಡ, ಶೇಖರ್, ಪ್ರಕಾಶ್ ನಾಯಕ್, ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಹಾಗೂ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಕ್ರೀಡಾ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಸಂಜೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ ಮಂಜೇಶ್ವರದ ಶಾರದ ಆರ್ಟ್ಸ್ ತಂಡದ ಐಸಿರಿ ಕಲಾವಿದೆರ್ ಅವರಿಂದ “ಮಲ್ಲ ಸಂಗತಿಯೇ ಅತ್ತ್” ಎಂಬ ತುಳು ಹಾಸ್ಯಮಯ ನಾಟಕ ನಡೆಯಲಿದೆ.
ಮಾಜಿ ಸಚಿವ ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಡಿ.ಕೆ. ಸ್ವಾಮಿ ನೇರಳಕಟ್ಟೆ , ಉದ್ಯಮಿ ಅಶೋಕ್ ರೈ ಕೋಡಿಂಬಾಡಿ, ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಮತ್ತಿತ್ತರರು ಮುಖ್ಯ ಅತಿಥಿಗಳಾಗಿ ಬಾಗವಹಿಸಲಿದ್ದಾರೆ.