ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯ ವೀಕ್ಷಿಸುವ ವೇಳೆ ಆಸ್ಟ್ರೇಲಿಯಾ ಪ್ರಧಾನಿ ಅಂತೋನಿ ಅಲ್ಬೇನಿಸ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಚಿತ್ರವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ, ಕ್ರಿಕೆಟ್ ಮೂಲಕ ಎರಡೂ ದೇಶಗಳ 75 ವರ್ಷಗಳ ಸ್ನೇಹವನ್ನು ಆಚರಿಸುತ್ತಿದ್ದೇವೆ’ ಎಂದು ಚಿತ್ರದೊಂದಿಗೆ ಒಕ್ಕಣೆಯೊಂದನ್ನು ಅವರು ಬರೆದಿದ್ದಾರೆ.
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಬನೀಸ್ ಮತ್ತು ಮೋದಿ ಅವರನ್ನು ಬಿಸಿಸಿಐ ಸನ್ಮಾನಿಸಿತು.
ಅಹಮದಾಬಾದ್ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣವೆನಿಸಿಕೊಂಡಿದೆ. ಭಾರತ ಮತ್ತು ಆಸ್ಟ್ರೇಲಿಯ ನಡುವಣ ಬಾರ್ಡರ್ ಗವಾಸ್ಕರ್ ಟ್ರೋಫಿಯ ನಾಲ್ಕನೇ ಹಾಗೂ ಅಂತಿಮ ಪಂದ್ಯ ಇಲ್ಲಿ ನಡೆಯುತ್ತಿದೆ. ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.