ಮಂಗಳೂರು ಮಹಾನಗರ ಪಾಲಿಕೆಯ ಶಕ್ತಿನಗರದ ದತ್ತನಗರದಲ್ಲಿ ನೂತನ ಪಾರ್ಕ್ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ನಗರದಲ್ಲಿ ಹೊಸ ಪಾರ್ಕ್ ನಿರ್ಮಾಣ ಹಾಗೂ ಪಾರ್ಕ್ ಗಳ ಅಭಿವೃದ್ಧಿಗೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಯೋಜನೆ ರೂಪಿಸಲಾಗಿದೆ. ನಗರದ ಪ್ರಮುಖ ಕೇಂದ್ರಗಳಲ್ಲಿ ಪಾರ್ಕ್ ನಿರ್ಮಾಣದಿಂದ ಸಾರ್ವಜನಿಕರಿಗೆ ಉಪಯೋಗವಾಗುತ್ತಿದ್ದು ಗ್ರೀನ್ ಮಂಗಳೂರು ಪರಿಕಲ್ಪನೆಗೂ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಜೀರ್ಣಾವಸ್ಥೆಯಲ್ಲಿರುವ ಕೆರೆಗಳ ಅಭಿವೃದ್ಧಿ ಕಾಮಗಾರಿಗಳೂ ಭರದಿಂದ ಸಾಗುತ್ತಿದೆ. ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ಪಾರ್ಕ್ ಹಾಗೂ ಕೆರೆಗಳ ಅಭಿವೃದ್ಧಿಗೆ ವಿಶೇಷವಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ವನಿತಾ ಪ್ರಸಾದ್, ಮುಖಂಡರಾದ ವಿಜಯ್ ಶೆಣೈ, ರವಿಚಂದ್ರ,ಎಚ್.ಕೆ ಪುರುಷೋತ್ತಮ, ರಾಘು ಆಚಾರ್ಯ, ವಿಜಯ್ ಆಳ್ವ, ಹರೀಶ್ ಗೌಡ, ಸುಜಯಾ, ಎ.ಜೆ ಶರ್ಮಾ, ಕರುಣೈಕರ, ರಾಜೇಶ್, ಪ್ರಶಾಂತ್, ಪ್ರವೀಣ್ ಶೆಟ್ಟಿ, ವಿನಯ್ ಕುಮಾರ್, ಲಲಿತಾ, ಭವ್ಯ, ಮಂಜುಳಾ, ನಳಿನಿ, ಲತಾ, ಸಮನಾ, ಅಮೃತ, ದತ್ತ ನಗರದ ನಿವಾಸಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.