Wednesday, November 27, 2024
ಸುದ್ದಿ

ಬೀಸಲಿದೆ ಬಿಸಿ ಬಿಸಿ ಗಾಳಿ..! ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ ..!- ಕಹಳೆ ನ್ಯೂಸ್

ದಿನದಿಂದ ದಿನಕ್ಕೆ ಬಿಸಿಲ ಬೇಗೆ ಹೆಚ್ಚುತ್ತಿದ್ದು ಜನ ಮನೆಯಿಂದ ಹೊರಬರೋದಿಕ್ಕೆ ಯೋಚಿಸುವ ಸ್ಧಿತಿ ನಿರ್ಮಾಣವಾಗಿದೆ. ಈ ನಡುವೆ ಭಾರತೀಯ ಹವಾಮಾನ ಇಲಾಖೆ ಕೆಲ ದಿನಗಳ ಹಿಂದೆ ಕರಾವಳಿಯಲ್ಲಿ ಬಿಸಿ ಗಾಳಿ ಬೀಸುವ ಎಚ್ಚರಿಕೆ ನೀಡಿತ್ತು. ಇದೀಗ ಮತ್ತೆ ಬಿಸಿ ಗಾಳಿಯ ಸೂಚನೆ ನೀಡಿದೆ.
ಕರಾವಳಿಯ ಕೆಲವು ಪ್ರದೇಶಗಳಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಇಂದು ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.
ಇದೇ ಸಂದರ್ಭ ಮಾರ್ಚ್ 13 ಮತ್ತು 14 ರಂದು ಉತ್ತರ ಕನ್ನಡ, ಉಡುಪಿ ಮತ್ತು ಒಳನಾಡು ಪ್ರದೇಶಗಳಾದ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆನೂ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು