ಖಾಸಗಿ ಎಕ್ಸ್ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕಿ ಗಂಭೀರ ಗಾಯಗೊಂಡ ಘಟನೆ ಕಾಪುವಿನಲ್ಲಿ ನಡೆದಿದೆ. ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ ಗಾಯಾಳು ವಿದ್ಯಾರ್ಥಿನಿ ಎಂದು ಗುರುತಿಸಲಾಗಿದ್ದು, ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ವರ್ಷಿತಾ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಇನ್ನೂ ಬಾಲಕಿಯ ತಲೆಗೆ ಗಂಭೀರ ಏಟಾಗಿದ್ದು, ಆಕೆಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಖಾಸಗಿ ಬಸ್ನ್ನು ವಶಕ್ಕೆ ಪಡೆದಿದ್ದಾರೆ.
You Might Also Like
ವಿಸಿಇಟಿಯಲ್ಲಿ ಮಂಗಳೂರು ವಿಭಾಗ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾಟ ನವೆಂಬರ್ 28 ರಂದು ನಡೆಯಲಿದೆ-ಕಹಳೆ ನ್ಯೂಸ್
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟವು ನವೆಂಬರ್ 28 ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ. ನವೆಂಬರ್ 28 ಗುರುವಾರ ಬೆಳಿಗ್ಗೆ 9.30 ಕ್ಕೆೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಪುತ್ತೂರು ತಾಲೂಕು ವಾಲಿಬಾಲ್ ಅಸೋಸಿಯೇಶನ್ನ ಅಧ್ಯಕ್ಷ ಸತೀಶ ರೈ ಕಟ್ಟಾವು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸಂತೋಷ್ ಕುತ್ತಮೊಟ್ಟೆ ಗೌರವ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ. ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಎರಡು ವಾಲಿಬಾಲ್ ಅಂಕಣದಲ್ಲಿ ಈ ಸ್ಪರ್ಧೆಗಳು ನಡೆಯಲಿದ್ದು, ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿAಗ್ ಕಾಲೇಜುಗಳ 18 ತಂಡಗಳು ಇದರಲ್ಲಿ ಭಾಗವಹಿಸುತ್ತವೆ ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ತಿಳಿಸಿದ್ದಾರೆ....
ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕಲ್ಲಡ್ಕ ವಲಯದ ನೂತನ ಕಛೇರಿಯ ಉದ್ಘಾಟನೆ-ಕಹಳೆ ನ್ಯೂಸ್
ಬಂಟ್ವಾಳ : ಗ್ರಾಮೀಣ ಭಾಗದ ಜನರ ಅಭಿವೃದ್ಧಿಯ ದೃಷ್ಟಿಯಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯು ಸಹಕಾರಿಯಾಗಿದೆ ಎಂದು ವಿಟ್ಲ ಕ್ಷೇತ್ರದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಹೇಳಿದರು....
ಲಯನ್ಸ್ ಕ್ಲಬ್ ಹಂಗಳೂರು ವತಿಯಿಂದ ರಕ್ತದಾನ ಶಿಬಿರ-ಕಹಳೆ ನ್ಯೂಸ್
ಕುಂದಾಪುರ: ಕೋಣಿಯ ಸ ಹಿ. ಪ್ರಾ ಶಾಲೆಯಲ್ಲಿ ಹಂಗಳೂರು ಲಯನ್ಸ್ ಕ್ಲಬ್ ಸ್ಥಳೀಯ ವಿವಿದ ಸಂಘಗಳಾದ ಹಳೆ ವಿದ್ಯಾರ್ಥಿ ಸಂಘ,ಕೇಳಕೇರಿ ಸಂಘ, ನಿತ್ಯಾಧರ ಸಂಘ ಮತ್ತು ಎಚ್...
‘RBI ಗವರ್ನರ್ ಶಕ್ತಿಕಾಂತ್ ದಾಸ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್
ಚೆನ್ನೈ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಅವರು ವೈದ್ಯಕೀಯ ವೃತ್ತಿಪರರ...