Tuesday, November 26, 2024
ಸುದ್ದಿ

“ಇತಿಹಾಸ ಗೊತ್ತಿಲ್ಲ ಅಂದ್ರೆ ಸುಮ್ಮನಿರಿ”: ಕಾಂಗ್ರೆಸ್ ಯುವ ನಾಯಕ ಮಿಥುನ್ ರೈಗೆ ರಕ್ಷಿತ್ ಶೆಟ್ಟಿ ತಿರುಗೇಟು –ಕಹಳೆ ನ್ಯೂಸ್

ಕರಾವಳಿ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ನೀಡಿದ ಹೇಳಿಕೆಯೊಂದು ಕಳೆದೆರದು ದಿನಗಳಿಂದ ಭಾರೀ ಚರ್ಚೆ ಹುಟ್ಟಾಕ್ಕಿದೆ. ಕೃಷ್ಣ ಮಠಕ್ಕೆ ಭೂಮಿ ಕೊಟ್ಟವರು ಮುಸ್ಲಿಂ ರಾಜರು ಎನ್ನುವ ಹೇಳಿಕೆ ಮಿಥುನ್ ರೈ ಹೇಳಿಕೆ ಭಾರೀ ಚರ್ಚೆ ಹುಟ್ಟಾಕಿದೆ. ವಿರೋಧ ಪಕ್ಷದ ನಾಯಕರು ಸೇರಿದಂತೆ ರಾಜ್ಯಾದ್ಯಂತ ಮಿಥುನ್ ರೈ ಹೇಳಿಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದೀಗ ನಟ ರಕ್ಷಿತ್ ಶೆಟ್ಟಿ ಕೂಡ ಟ್ವೀಟ್ ಮಾಡಿ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಮೂಡಬಿದಿರೆಯಲ್ಲಿ ನಡೆದ ‘ನಮ್ಮೂರ ಮಸೀದಿ ನೋಡ ಬನ್ನಿ’ ಕಾರ್ಯಕ್ರಮದಲ್ಲಿ ಮಿಥುನ್‌ ರೈ, ಮಾತನಾಡಿ ಉಡುಪಿ ಮಠಕ್ಕೆ ಮುಸ್ಲಿಂ ರಾಜರು ಜಾಗ ನೀಡಿದ್ದಾರೆ. ಸೌಹಾರ್ದತೆಯನ್ನು ಹೊಂದಿರುವ ಜಿಲ್ಲೆ ದಕ್ಷಿಣ ಕನ್ನಡ. ಬಪ್ಪನಾಡು ದುರ್ಗಾಪರಮೇಶ್ವರಿ ದೇವರು ಒಲಿದಿದ್ದು ಬಪ್ಪ ಬ್ಯಾರಿಗೆ. ತುಳುನಾಡಿನಲ್ಲಿ ಪವಾಡ ದೈವ ಕೊರಗಜ್ಜ ಕಟ್ಟೆಯೊಂದರಲ್ಲಿ ಒಬ್ಬ ಮುಸ್ಲಿಂ ವ್ಯಕ್ತಿಯಿಂದ ಪೂಜೆ ನಡೆಯುತ್ತೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ನಟ ರಕ್ಷಿತ್‌ ಶೆಟ್ಟಿ ಟ್ವೀಟ್ ಮಾಡಿ “ದೇವಾಲಯದ ಪಟ್ಟಣವಾದ ಉಡುಪಿ ಸಾವಿರ ವರ್ಷಗಳ ಇತಿಹಾಸ ಹೊಂದಿದೆ. ನಿಮಗೆ ಗೊತ್ತಿಲ್ಲ ಅಂದಮೇಲೆ ಸಾರ್ವಜನಿಕ ವೇದಿಕೆಯಲ್ಲಿ ಅಸಂಬದ್ಧವಾಗಿ ಮಾತನಾಡುವುದೇಕೆ ?” ಎಂದು ಪ್ರಶ್ನಿಸಿದ್ದಾರೆ. ಮುಸ್ಲಿಂ ಓಲೈಕೆ ಹಾಗೂ ಚುನಾವಣೆ ಟಿಕೆಟ್‌ಗಾಗಿ ಹೀಗೆಲ್ಲಾ ಮಾತನಾಡುತ್ತಿದ್ದಾರೆ ಎಂದು ನೆಟ್ಟಿಗರು ಕಾಮೆಂಟ್ ಬಾಕ್ಸ್‌ನಲ್ಲಿ ಬರೆದಿದ್ದಾರೆ.