Recent Posts

Monday, January 27, 2025
ಸುದ್ದಿ

60ರ ವೃದ್ಧನಿಂದ 7ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಕಹಳೆ ನ್ಯೂಸ್

ನವದೆಹಲಿ ; ಏಳು ವರ್ಷದ ಬಾಲಕಿ ಮೇಲೆ 60 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸೆಗಿರುವ ಘಟನೆ ದೆಹಲಿಯ ಗುಲಾಬಿ ಬಾಗ್ ಪ್ರದೇಶದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಲೈಂಗಿಕ ದೌರ್ಜನ್ಯ ನಡೆದಿರುವ ಕುರಿತು ಸಂತ್ರಸ್ತೆ ಹಾಗೂ ಅವಳ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನಿಡಿದ್ದಾರೆ. ದೂರಿನಲ್ಲಿ ಹಲವು ವಿಚಾರಗಳನ್ನ ತಿಳಿಸಿದ್ದಾರೆ. ನೆರೆ ಮನೆಯಲ್ಲಿ ವಾಸವಾಗಿದ್ದ 60 ವರ್ಷ ವಯಸ್ಸಿನ ಬದರಿನಾಥ್ ಎಂಬಾತ ಹಲವು ದಿನಗಳಿಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಬಾಲಕಿಯ ಬಟ್ಟೆ ತೆಗೆದು ಆಕೆಯ ಖಾಸಗಿ ಅಂಗಗಳನ್ನು ಮುಟ್ಟಿದ್ದಾನೆ. ಸಂತ್ರಸ್ತ ಬಾಲಕಿ ಈ ಬಗ್ಗೆ ತನ್ನ ತಾಯಿಗೆ ತಿಳಿಸಿದ್ದಾಳೆ. ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿಯವರು ತಿಳಿಸಿದ್ದಾರೆ.

ಇನ್ನು ಭಾರತೀಯ ದಂಡ ಸಂಹಿತೆ 376 ಮತ್ತು ಪೋಕ್ಸೋ ಕಾಯಿದೆ 6ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿಯವರು ತಿಳಿಸಿದ್ದಾರೆ.