Monday, November 25, 2024
ಸುದ್ದಿ

ರಾಜ್ಯಕ್ಕೆ ಪ್ರಧಾನಿ ಮೋದಿಯ ಆಗಮನ – ಮಂಡ್ಯ ಹಾಗೂ ಧಾರವಾಡದಲ್ಲಿ ಹಲವು ಕಾಮಗಾರಿಗಳಿಗೆ ಚಾಲನೆ – ಕಹಳೆ ನ್ಯೂಸ್

ಮಂಗಳೂರು : ಇಂದು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಪ್ರವಾಸದಲ್ಲಿದ್ದು, ಮಂಡ್ಯ ಹಾಗೂ ಧಾರವಾಡ ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಧ್ಯಾಹ್ನ 11:10ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ಪ್ರಧಾನಿ ಮೋದಿ ಮಂಡ್ಯಗೆ ತೆರಳಿ, ಅಲ್ಲಿಂದ ಬೆಂಗಳೂರು ಮತ್ತು ಮೈಸೂರಿನ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದ್ದಾರೆ.. ಬಳಿಕ ಮಂಡ್ಯದಲ್ಲಿ 1.8 ಕಿಮೀ ರೋಡ್ ಶೋ ನಡೆಸಿದ್ರು.

ನಂತರ ಮದ್ದೂರಿನ ಗೆಜ್ಜಲಗೆರೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ 5,700 ಕೋಟಿ ವೆಚ್ಚದ ಮಂಡ್ಯ-ಕುಶಾಲನಗರ ಹೆದ್ದಾರಿಗೆ ಭೂಮಿ ಪೂಜೆ ಮಾಡಲಿದ್ದಾರೆ. ಜೊತೆಗೆ ಕೆಲವು ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬಳಿಕ ಪಿಇಎಸ್ ಎಂಜಿನಿಯರಿAಗ್ ಕಾಲೇಜು ಹೆಲಿಪ್ಯಾಡ್‌ನಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಹುಬ್ಬಳಿಗೆ ತೆರಳಲಿದ್ದಾರೆ.
ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಧಾರವಾಡದ ಚಿಕ್ಕಮಲ್ಲಿಗ ವಾಡದಲ್ಲಿರುವ ‘ಐಐಟಿ ಧಾರವಾಡ’ದ ನೂತನ ಕ್ಯಾಂಪಸ್‌ಗೆ ಭೇಟಿ ನೀಡಿ, ಸಂಜೆ ೪ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ‘ಐಐಟಿ ಧಾರವಾಡ’ದ ಕ್ಯಾಂಪಸ್, ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ ವಿಶ್ವದ ಅತಿ ಉದ್ದನೆಯ ಪ್ಲಾಟ್‌ಫಾರ್ಮ್ ಉದ್ಘಾಟಿಸಲಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆಗೆ ಶಂಕುಸ್ಥಾಪನೆ ಹಾಗೂ ವಿವಿಧ ರೈಲುಗಳಿಗೆ ಚಾಲನೆ ನೀಡಲಿದ್ದಾರೆ
ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಮಂಡ್ಯ ಹಾಗೂ ಧಾರವಾಡದಲ್ಲಿ ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಭದ್ರತಾ ದೃಷ್ಟಿಯಿಂದ ಪೊಲೀಸ್ ಇಲಾಖೆ ಸಹ ಬಿಗಿ ಬಂದೋಬಸ್ತ್ ಕಲ್ಪಿಸಿದೆ.