Friday, January 24, 2025
ಸುದ್ದಿ

Shocking News : ಯುವತಿಯನ್ನು ಕಟ್ಟಿಹಾಕಿ ಮುಟ್ಟಿನ ರಕ್ತ ಸಂಗ್ರಹಿಸಿ 50 ಸಾವಿರ ರೂ.ಗೆ ಮಾರಾಟ..! – ಕಹಳೆ ನ್ಯೂಸ್

ಮುಂಬೈ: ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಹಸಿವಿನಿಂದ ಬಳಲುವಂತೆ ಮಾಡಿ, ಆಕೆಯ ಮುಟ್ಟಿನ ರಕ್ತವನ್ನು ಸಂಗ್ರಹಿಸಿ 50 ಸಾವಿರ ರೂ.ಗೆ ಮಾರಾಟ ಮಾಡಿರುವ ಅಮಾನವೀಯ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಾರಾಷ್ಟ್ರದ ಬೀಡ್​ ಜಿಲ್ಲೆಯ ಸೌಂದಾನಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಂತಾರಾಷ್ಟ್ರೀಯ ಮಹಿಳಾ ದಿನದಂದು ಬೆಳಕಿಗೆ ಬಂದಿದೆ.

27 ವರ್ಷದ ಸಂತ್ರಸ್ತ ಮಹಿಳೆಯ ಕುಟುಂಬ ನೀಡಿರುವ ದೂರಿನ ಆಧಾರದ ಮೇಲೆ ಮಹಿಳೆಯ ಪತಿ ಮತ್ತು ಆಕೆಯ ಅತ್ತೆ ಸೇರಿದಂತೆ ಒಟ್ಟು 7 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂತ್ರಸ್ತ ಮಹಿಳೆಯನ್ನು ಮುಟ್ಟಿನ ಸಮಯದಲ್ಲಿ ಮೂರು ದಿನಗಳ ಕಾಲ ಹಸಿವಿನಿಂದ ಬಳಲಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಹಿಳೆಗೆ 2019ರಲ್ಲಿ ವಿವಾಹವಾಗಿದೆ. ಪ್ರೇಮ ವಿವಾಹವಾಗಿದ್ದರೂ ಆಕೆಯ ಪತಿ ಮತ್ತು ಆತನ ಮನೆಯವರು ಮಹಿಳೆಗೆ ವಿವಿಧ ಕಾರಣಗಳಿಗಾಗಿ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಆಕೆಯ ಅತ್ತೆ-ಮಾವಂದಿರು ಮುಟ್ಟಿನ ಅವಧಿಯಲ್ಲಿ ಅವಳನ್ನು ಕಟ್ಟಿಹಾಕಿ, ಹತ್ತಿಯನ್ನು ಬಳಸಿ ಮುಟ್ಟಿನ ರಕ್ತವನ್ನು ಸಂಗ್ರಹಿಸಿ, ಅದನ್ನು ವಾಮಾಚಾರ ಮಾಡುವವರಿಗೆ ಮಾರಾಟ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆಯ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಹಾಗೂ ಸಚಿವ ಚಂದ್ರಕಾಂತ ಪಾಟೀಲ ಅವರು ಆಗ್ರಹಿಸಿದ್ದಾರೆ. ಶಿವಸೇನೆಯ ಮನೀಶಾ ಕಾಯಂದೆ ಅವರು ವಿಧಾನ ಪರಿಷತ್ತಿನಲ್ಲಿ ವಿಷಯ ಪ್ರಸ್ತಾಪಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿದರು.