Thursday, January 23, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಪ್ರಾಪ್ತ ಹಿಂದೂ ಬಾಲಕಿಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ ಇಸ್ಲಾಮಿಕ್ ಜಿಹಾದಿಗಳು ; ಕಾಮುಕ ಹಸೈನಾರ್, ಅಬ್ಬಾಸ್ ನನ್ನು ಹಿಡಿದು ಉಪ್ಪಿನಂಗಡಿ ಪೋಲೀಸರಿಗೆ ಒಪ್ಪಿಸಿದ ಸ್ಥಳೀಯರು..! – ಕಹಳೆ ನ್ಯೂಸ್

ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕರಿಬ್ಬರು ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30) ಎಂದು ಗುರುತಿಸಲಾಗಿದೆ.

ಆರೋಪಿಗಳಿಬ್ಬರು ಕಳೆದ ಮೂರು ದಿನಗಳಿಂದ ಮರ ತುಂಡರಿಸುವ ಕೆಲಸದ ನಿಮಿತ್ತ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸಿದ್ದು, ಈ ಸಂದರ್ಭ ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ಹೋಗಿ ಮನೆಯಲ್ಲಿನ ಸದಸ್ಯರ ಬಗ್ಗೆ ಗಮನಿಸಿದ ಆರೋಪಿಗಳ ಪೈಕಿ ಹಸೈನಾರ್ ಶುಕ್ರವಾರ ಸಂಜೆ ಸಂತ್ರಸ್ತೆಯ ಮನೆಗೆ ಬಂದು ಮರ ತುಂಡರಿಸುವ ಚೈನ್ ಇಲ್ಲಿ ಬಾಕಿಯಾಗಿದೆ ಎಂದು ಹೇಳಿ ಬಾಲಕಿಯ ಕೈಗೆ ಚೀಟಿಯೊಂದನ್ನು ನೀಡಿ, ಈ ನಂಬ್ರರಿಗೆ ಫೋನ್ ಮಾಡು, ಇಲ್ಲದಿದ್ದರೆ ನಿನ್ನನ್ನು ಬಿಡುವುದಿಲ್ಲ ಎಂಬುವುದಾಗಿ ಜೀವ ಬೆದರಿಕೆಯೊಡ್ಡಿ ಹೋಗಿದ್ದ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.

ಇನ್ನು ಮರು ದಿನ ರಾತ್ರಿ 8 ಗಂಟೆಯ ಸುಮಾರಿಗೆ ಹಸೈನಾರ್ ತನ್ನ ಸಹಚರ ಅಬ್ಬಾಸ್ ಎಂಬಾತನೊಂದಿಗೆ ಮನೆಯ ಒಳಗೆ ಅಕ್ರಮವಾಗಿ ಪ್ರವೇಶ ಮಾಡಿ, ಬಾಲಕಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ.

ಬಾಲಕಿ ಹಾಗೂ ಬಾಲಕಿಯ ತಾಯಿ ರಕ್ಷಣೆಗಾಗಿ ಬೊಬ್ಬೆ ಹೊಡೆದಾಗ ನೆರೆ ಮನೆಯವರು ಓಡಿ ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ಬಳಿಕ ಸ್ಥಳೀಯರ ಸಹಕಾರದಿಂದ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.