Thursday, January 23, 2025
ಪುತ್ತೂರುಸುದ್ದಿ

ವಿಧಾನಸಭಾ ಚುನಾವಣೆ; ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಚೆಕ್ ಪೋಸ್ಟ್ ಗಳಲ್ಲಿ ವಾಹನ ತಪಾಸಣೆ –ಕಹಳೆ ನ್ಯೂಸ್

ರಾಜ್ಯದಲ್ಲಿ ಚುನಾವಣೆ ಕಾವು ಏರುತ್ತಿದ್ದಂತೆ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು, ವಾಹನ ತಪಾಸಣೆಗೆ ಮುಂದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನೂ ಸ್ವಲ್ಪ ದಿನಗಳಲ್ಲಿ ವಿಧಾನಸಭಾ ಚುನಾವಣೆಯ ಘೋಷಣೆಯಾಗಲಿದ್ದು, ಪೊಲೀಸರು ಕರ್ನಾಟಕ -ಕೇರಳ ಗಡಿಭಾಗದ ಅಂತರ್ ರಾಜ್ಯ ಪೋಲಿಸ್ ಚೆಕ್ ಪೋಸ್ಟ್ ಗಳಲ್ಲಿ ವಾಹನ ಬಿಗು ತಪಾಸಣೆ ಆರಂಭಿಸಿದ್ದಾರೆ.

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಪಾಣಾಜೆ ಈಶ್ವರಮಂಗಲ, ಹಾಗೂ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾರಡ್ಕದಲ್ಲಿ ಕಟ್ಟುನಿಟ್ಟಿನ ವಾಹನ ತಪಾಸಣೆ ನಡೆಸುವಂತೆ, ಗುಪ್ತಚರ ಇಲಾಖೆ ಪೊಲೀಸರಿಗೆ ಸೂಚನೆ ನೀಡಿದ್ದು, ಈ ಹಿನ್ನಲೆ ತಪಾಸಣಾ ಕಾರ್ಯ ನಡೆಯುತ್ತಿದೆ.

ಇನ್ನೂ ಪೊಲೀಸರು ವಾಹನಗಳನ್ನು ಸಮಗ್ರ ರೀತಿಯಲ್ಲಿ ಪರಿಶೀಲನೆ ಮಾಡುವ ಜತೆಗೆ ಚಾಲಕರಿಂದ ವಾಹನ ಸಂಚರಿಸುವ ಸ್ಥಳ, ದೂರವಾಣಿ ಸಂಖ್ಯೆ, ಹಾಗೂ ದಾಖಲೆಗಳ ವಿವರ ಪಡೆದುಕೊಳ್ಳುತ್ತಿದ್ದಾರೆ.