Thursday, January 23, 2025
ಸುದ್ದಿ

ನರ್ಸ್ ವೇಷಧರಿಸಿ ನವಜಾತ ಶಿಶುವಿನ ಕಳ್ಳತನ –ಕಹಳೆ ನ್ಯೂಸ್

ಹಾವೇರಿ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಯಾಮಾರಿಸಿ ನವಜಾತ ಶಿಶುವನ್ನು ಕಳ್ಳತನ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಬ್ಯಾಡಗಿ ತಾಲೂಕಿನ ಗುಡ್ಡದಹೊಸಳ್ಳಿ ಗ್ರಾಮದ ರಂಜಿತಾ ಕುಂಬಾರ ಎಂಬುವವರು ಶುಕ್ರವಾರ ಸಂಜೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಶನಿವಾರ ಸಂಜೆ ಮಹಿಳೆಯೊಬ್ಬಳು ನರ್ಸ್ ವೇಷದಲ್ಲಿ ಬಂದು ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಹೇಳಿ ಶಿಶುವಿನ ಅಜ್ಜಿಯನ್ನು ಯಾಮಾರಿಸಿ ಮಗುವನ್ನು ಕಳ್ಳತನ ಮಾಡಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶಿಶುವಿಗೆ ಚಿಕಿತ್ಸೆ ಕೊಡಿಸುವುದಾಗಿ ಹೇಳಿದ ನರ್ಸ್ ವೇಷಧಾರಿ ಮಹಿಳೆ, ಅಜ್ಜಿ ಹಾಗೂ ಶಿಶುವನ್ನು ನಗರದ ವಿವಿಧ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಳು. ಮರಳಿ ಜಿಲ್ಲಾಸ್ಪತ್ರೆಗೆ ಬರುವ ವೇಳೆ ಮಾರ್ಗಮಧ್ಯದಲ್ಲಿ ಹಣ್ಣು ತೆಗೆದುಕೊಂಡು ಬರುವುದಾಗಿ ಅಜ್ಜಿಯನ್ನು ನಂಬಿಸಿ ಶಿಶುವನ್ನು ಕಳ್ಳತನ ಮಾಡಿದ್ದಾಳೆ. ಕಳ್ಳತನದ ದೃಶ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನವಜಾತ ಶಿಶುವನ್ನು ಕಳೆದುಕೊಂಡ ಪೋಷಕರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಈ ಕುರಿತು ಹಾವೇರಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.