ಶೆಡ್ ಕುಸಿದು ಬಿದ್ದ ಪರಿಣಾಮ 10 ಮಂದಿ ಕೂಲಿ ಕಾರ್ಮಿಕರು ಗಾಯಗೊಂಡ ಘಟನೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಡೆದಿದೆ. ಹೊಸದಾಗಿ ನಿರ್ಮಾಣವಾಗುತ್ತಿರುವ ಸೆಂಟ್ರಲ್ ಮಾರುಕಟ್ಟೆ ಕಟ್ಟಡದ ಅಡಿಭಾಗದಲ್ಲಿ ಕಾರ್ಮಿಕರು ಮಲಗಿದ್ದು, ಈ ವೇಳೆ ಅವಘಡ ಸಂಭವಿಸಿದೆ.
ಸೆಂಟ್ರಲ್ ಮಾರ್ಕೆಟ್ ಕಟ್ಟಡ ನಿರ್ಮಾಣಕ್ಕಾಗಿ ಕಾರ್ಮಿಕರು ಮಲಗಿದ್ದ ಶೆಡ್ಗಳ ಅಡಿ ಭಾಗದಲ್ಲಿ ಸುಮಾರು 30 ಅಡಿಗಳಷ್ಟು ಆಳ ಮಣ್ಣನ್ನು ತೆಗೆಯಲಾಗಿದ್ದು, ಈ ಸಂದರ್ಭ ಏಕಾಏಕಿ ಶೆಡ್ನ ತಳ ಭಾಗ ಕುಸಿದಿದೆ. ಘಟನೆಯಲ್ಲಿ ಕಾರ್ಮಿಕರಿಗೆ ಸಣ್ಣ ಪುಟ್ಟ ಏಟಾಗಿದ್ದು, ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ಇನ್ನೂ ಈ ಘಟನೆಯಲ್ಲಿ ಅದೃಷ್ಟವಶತ್ ಯಾವುದೇ ಪ್ರಾಣಾಪಾಯವಾಗಿಲ್ಲ, ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.