ಬಂಟ್ವಾಳ : ಕಾರಿಂಜೇಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಿಷೇದಿಸುವಂತೆ ಅದೇಶ ಹೊರಡಿಸಿದ ಸರ್ಕಾರ – ಕಹಳೆ ನ್ಯೂಸ್
ಬಂಟ್ವಾಳ: ಕಾರಿಂಜ ದೇವಾಲಯದ ಸುತ್ತಮುತ್ತ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದರಿಂದ ದೇವಸ್ಥಾನಕ್ಕೆ ಹಾನಿಯಾಗುತ್ತಿದೆ ಎಂಬುದು ಅರೋಪವಾಗಿದ್ದು, ಇದರ ವಿರುದ್ಧ ಪ್ರತಿಭಟನೆಗಳು ಹೋರಾಟಗಳು ನಿರಂತರವಾಗಿ ನಡೆದಿತ್ತು.
ಆದರೆ ಇದೀಗ ಸರಕಾರ ಗಣಿಗಾರಿಕೆಗೆ ನಿಷೇಧದ ಅದೇಶ ನೀಡಿದ್ದು, ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು, 1994ರ ನಿಯಮ 8(3) ರಲ್ಲಿ ಪ್ರದವಾಗಿರುವ ಅಧಿಕಾರವನ್ನು ಚಲಾಯಿಸಿ ಸರ್ಕಾರವು ದಕ್ಷಿಣ ಕನ್ನಡ ಜಿಲೆ, ಬಂಟ್ವಾಳ ತಾಲೂಕು, ಕಾವಳಮೂಡುರು ಗ್ರಾಮದ ವ್ಯಾಪ್ತಿಯ ಶ್ರೀ ಕಾರಿಂಜೇಶ್ವರ ದೇವಸ್ಥಾನದ 02 ಕಿಲೋ ಮೀಟರ್ ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಕಾಯಿರಿಸಿ, ಸದರಿ ಸ್ಥಳದ 02 ಕಿಲೋ ಮೀಟರ್ ಸುತ್ತಳತೆ ವ್ಯಾಪ್ತಿಯಲ್ಲಿ, ಎಲ್ಲಾ ರೀತಿಯ ಗಣಿಗಾರಿಕ ಮತ್ತು ಕಲ್ಲುಪುಡಿ (ಕುವ ಚಟುವಟಿಕೆಯನ್ನು ತಕ್ಷಣದಿಂದ ಜಾರಿಗೆ ಬರುವಂತ ಹಾಗೂ ಮುಂದಿನ ಆದೇಶದವರೆಗೆ ನಿಷೇಧಿಸಿದೆ. ಎಂಬ ಅದೇಶ ಹೊರಡಿಸಿದೆ.
ಹಿಂದೂ ಜಾಗರಣ ವೇದಿಕೆಯ ಹೋರಾಟಕ್ಕೆ ಶಾಸಕರ ಸಾಥ್ .
ಅಕ್ರಮ ಗಣಿಗಾರಿಕೆಯ ವಿರುದ್ದ ಹಿಂದೂ ಜಾಗರಣ ವೇದಿಕೆ ವತಿಯಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿತ್ತು.
ಗಣಿಗಾರಿಕೆಯನ್ನು ನಿಲ್ಲಿಸಲು ಪ್ರತಿಭಟನೆ , ಸಹಿತ ಅನೇಕ ಹೋರಾಟಗಳು ನಡೆದ ಪರಿಣಾಮ ಹಾಗೂ ಇವರ ಹೋರಾಟದ ಜೊತೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ನೀಡಿದ ಬೆಂಬಲದಿಂದ ಗಣಿಗಾರಿಕೆ ಬಂದ್ ಆಗಿದೆ.
ಈ ಬಗ್ಗೆ ಹಿಂದೂ ಜಾಗರಣಾ ವೇದಿಕೆಯವರ ಹೋರಾಟದ ಬಗ್ಗೆ ಶಾಸಕರು ಮುಖ್ಯಮಂತ್ರಿ ಅವರಿಗೆ ಗಣಿಗಾರಿಕೆಯನ್ನು ನಿಲ್ಲಿಸುವ ಅದೇಶ ಮಾಡುವಂತೆ ಮನವಿ ಮಾಡಿದ್ದರು. ಇದೀಗ ಸರಕಾರದ ಅದೇಶ ಹೊರಡಿಸಿದ್ದು, ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ.