Sunday, November 24, 2024
ಸುದ್ದಿ

ಮುಂದಿನ ವರ್ಷದಿಂದ ರಾಜ್ಯದ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ…! – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸಲು ನಿರ್ಧರಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದಲ್ಲಿ ಈವರೆಗೆ 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರವೇ ಮೊಟ್ಟೆ ವಿತರಿಸಲಾಗುತ್ತಿದ್ದು, ಈ ಯೋಜನೆ ಯಶಸ್ವಿಯಾದ ಬೆನ್ನಲ್ಲೇ ಇದೀಗ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೂ ವಾರಕ್ಕೆ ಎರಡು ಬಾರಿ ಮೊಟ್ಟೆ ವಿತರಿಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಈಗಾಗಲೇ ಮೊಟ್ಡೆ ನೀಡಲು ಶಿಕ್ಷಣ ಇಲಾಖೆಗೆ 300 ಕೋಟಿ ರೂ. ಅವಶ್ಯತೆ ಇದೆ ಎಂದು ಪ್ರಸ್ತಾವನೆ ಸಲ್ಲಿಸಲಾಗಿದೆ.

9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಪ್ರಸ್ತಾವನೆಗೆ ಸಿಎಂ ಬೊಮ್ಮಾಯಿ ಕೂಡ ಮೌಖಿಕವಾಗಿ ಸಹಮತ ವ್ಯಕ್ತಪಡಿಸಿದ್ದು, ಆದೇಶ ಹೊರಬಿದ್ದರೆ 2023-24 ನೇ ಶೈಕ್ಷಣಿಕ ಸಾಲಿನಿಂದಲೇ ವಿದ್ಯಾರ್ಥಿಗಳಿಗೆ ಮೊಟ್ಟೆ ಸಿಗಲಿದೆ.