Friday, January 24, 2025
ಸುದ್ದಿ

ಕೂಲಿ ಕೆಲಸಕ್ಕೆ ತೆರಳಿದ್ದ ಮಹಿಳೆ ಕುಸಿದು ಬಿದ್ದು ಮೃತ್ಯು..! – ಕಹಳೆ ನ್ಯೂಸ್

ಕೂಲಿ ಕೆಲಸಕ್ಕೆಂದು ಹೋದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಇಲ್ಲಿನ ಮುಂಡಾಜೆ ಗ್ರಾಮದ ಸನ್ಯಾಸಿಕಟ್ಟೆ ನಿವಾಸಿ ಪಾರ್ವತಿ ಮೃತ ದುರ್ದೈವಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಸೊಮಂತ್ತಡ್ಕ ಗಣೇಶ ಎಂಬವರ ಮನೆಗೆ ಕೂಲಿ ಕೆಲಸಕ್ಕೆಂದು ಹೋಗಿದ್ದು , ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ಪ್ರಜ್ಞೆ ಕಳೆದುಕೊಂಡ ಮಹಿಳೆಯನ್ನು. ಕೂಡಲೇ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆದರೆ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇನ್ನೂ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.