Friday, January 24, 2025
ಸುದ್ದಿ

ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕದ್ದ ಖತರ್ನಾಕ್ ಕಳ್ಳಿಯರಿಬ್ಬರು ಅಂದರ್ –ಕಹಳೆ ನ್ಯೂಸ್

ಮಣಿಪಾಲದ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಬ್ಯಾಗ್‍ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದ ಘಟನೆ ನಡೆದಿದೆ. ಕೃತ್ಯ ನಡೆದ 24 ಗಂಟೆಗಳೊಳಗೆ ಪೊಲೀಸರು ಇಬ್ಬರು ಕಳ್ಳಿಯರನ್ನು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶಿವಮೊಗ್ಗ ಮೂಲದ ಲಲಿತಾ ಬೋವಿ(41), ಸುಶೀಲಮ್ಮ ಬೋವಿ(64) ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 4,03,000 ರೂ. ಮೌಲ್ಯದ 100 ಗ್ರಾಂ ಬಂಗಾರದ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ .

ನಿನ್ನೆ ಮಧ್ಯಾಹ್ನದ ವೇಳೆ ಕಾಪುವಿನ ಪುನೀತ್ ವಂಸತ್ ಹೆಗ್ಡೆ ಅವರು ಮುಂಬೈಗೆ ಹೋಗುವ ಸಲುವಾಗಿ ಮಣಿಪಾಲದ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತಿದ್ದ ವೇಳೆ ಕಳ್ಳರು ಇವರ ಬ್ಯಾಗ್‌ನಲ್ಲಿ ಇದ್ದ 4,00,000 ರೂ. ಮೌಲ್ಯದ ಚಿನ್ನಾಭರಣ ಹಾಗೂ 3000 ರೂ. ಮೌಲ್ಯದ ವಾಚ್‌ನ್ನು ಕಳವು ಗೈದು ಪರಾರಿಯಾಗಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಮಣಿಪಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ