Monday, November 25, 2024
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಗುಳಿಗ ದೈವಕ್ಕೆ ಅಪಮಾನ ಪ್ರಕರಣ ; ತೀರ್ಥಹಳ್ಳಿಯ ಕಾಂಗ್ರೆಸ್ ಕೇವಲ ರಾಜಕೀಯ ದುರುದ್ದೇಶದಿಂದ ‘ಶಿವದೂತೆ ಗುಳಿಗೆ ‘ ತುಳು ನಾಟಕ ಪ್ರದರ್ಶನ ಮಾಡಿದೆ – ಸ್ಪಷ್ಟನೆ ನೀಡಿದ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಕಾಂತಾರ ಚಿತ್ರ ಬಂದ ಮೇಲೆ ತುಳುನಾಡಿನ ಆರಾಧನಾ ಪದ್ಧತಿಯಾದ ಭೂತಾರಾಧನೆ/ದೈವಾರಾಧನೆ ಎಲ್ಲೆಡೆ ಪರಿಚಿತವಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡಕ್ಕೆ ಬಂದಿದ್ದ ಸಂದರ್ಭ ಅಮಿತ್​ ಷಾ ಕೂಡ ಮೆಚ್ಚುಗೆ ಸೂಚಿಸಿದ್ದರು. ಇದೀಗ ಸಚಿವರು ಕರಾವಳಿಯಲ್ಲಿ ಜನಮೆಚ್ಚುಗೆ ಪಡೆದ ‘ಶಿವದೂತೆ ಗುಳಿಗೆ’ (ಗುಳಿಗ) ತುಳು ನಾಟಕಕ್ಕೆ ಅವಮಾನ ಮಾಡಿದ್ದಾರೆ ಎನ್ನಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವಿಚಾರವಾಗಿ ಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಸ್ಪಷ್ಟನೆ ನೀಡುವ ಸಂದರ್ಭ ಮಾತನಾಡಿದ ಸಚಿವರು ‘ಕಾಂಗ್ರೆಸ್ ಅನ್ನು ಟೀಕಿಸಿ ದ್ದೇನೆ, ತುಳು ಸಂಸ್ಕೃತಿ, ದೈವಗಳನ್ನಲ್ಲ. ನೆರೆಯ ತುಳು ನಾಡಿನಲ್ಲಿ, ಶ್ರದ್ಧಾ ಭಕ್ತಿಯಿಂದ ಆರಾಧಿಸುವ, ಗುಳಿಗ ದೈವವನ್ನು ಆಧರಿಸಿ, ರಚಿಸಿರುವ ಪೌರಾಣಿಕ ನಾಟಕದ ಬಗ್ಗೆ ಮೆಚ್ಚುಗೆ ಇದೆ. ಹಾಗೂ ದೈವದ ಬಗ್ಗೆ ಅಪಾರ ಭಕ್ತಿ ಗೌರವವನ್ನು ಹೊಂದಿದ್ದೇನೆ.

ರಂಗಭೂಮಿಯ ಮೇಲೆ, ಆಧುನಿಕ ತಂತ್ರಜ್ಞಾನ ವನ್ನು ಬಳಸಿಕೊಂಡು, , ಯಶಸ್ವಿ ಪ್ರದರ್ಶನವನ್ನು ಕಲಾ ರಸಿಕರಿಗೆ ಪರಿಚಯಿಸುತ್ತಿರುವ, ಕಲಾವಿದರು ಹಾಗೂ ವಿಶೇಷವಾಗಿ ನಿರ್ದೇಶಕ, ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ ಸೃಜನಶೀಲತೆ ಬಗ್ಗೆ ಅಭಿಮಾನ ಇದೆ.

ಆದರೆ, ಜನರ ವಿಶ್ವಾಸ ಕಳೆದು ಕೊಂಡಿರುವ, ತೀರ್ಥಹಳ್ಳಿಯ ಸ್ಥಳೀಯ ಕಾಂಗ್ರೆಸ್ ನಾಯಕರು, ಕೇವಲ ರಾಜಕೀಯ ದುರುದ್ದೇಶದಿಂದ ‘ಶಿವದೂತೆ ಗುಳಿಗೆ’ ನಾಟಕದ ಪ್ರದರ್ಶನದ ಮೂಲಕ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಹತಾಶ ಪ್ರಯತ್ನದ ಬಗ್ಗೆ ಪ್ರಸ್ತಾಪಿಸಿದ್ದೇನೆ. ಅದರ ಹೊರತು, ನಾಟಕದ ಬಗ್ಗೆ ಅಥವಾ ದೈವದ ವಿರುದ್ಧ ಮಾತನಾಡಿಲ್ಲ.

ಪಂಜುರ್ಲಿ, ಗುಳಿಗ ದೈವಗಳ ಮಹಾತ್ಮ ಯಕ್ಷಗಾನ ಪ್ರದರ್ಶನ..

ಆದರೆ, ನಾನಾಡಿದ ಮಾತುಗಳನ್ನು, ಅಪಾರ್ಥ ಬರುವಂತೆ ಮೂಡಿಸಿ, ಸಾಮಾಜಿಕ ಜಾಲತಾಣಗಳಲ್ಲಿ, ಅಪ ಪ್ರಚಾರ ನಡೆಸುತ್ತಿರುವ ಕುಹಕಿಗಳ ಉದ್ದೇಶ ಈಡೇರುವುದಿಲ್ಲ’ ಎಂದು ಹೇಳಿದರು.