Thursday, January 23, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಫುಲ್ವಾರಿ ಶರೀಫ್‌ ಪ್ರಕರಣ ; ಪ್ರವೀಣ್‌ ಹತ್ಯೆಯ ಆರೋಪಿಗಳಿಗೂ ಹಣ ಸಂದಾಯ.! – ಕಹಳೆ ನ್ಯೂಸ್

ಪುತ್ತೂರು, ಮಾ 17 : ಫುಲ್ವಾರಿ ಶರೀಫ್‌ನಲ್ಲಿ ನಡೆದ ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ಒದಗಿಸಿರುವ ಆರೋಪದಡಿ ಐವರನ್ನು ಕಳೆದ ಜುಲೈಯಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಇದೀಗ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಹತ್ಯೆಗೈದ ಆರೋಪಿಗಳಿಗೂ ಹಣ ಸಂದಾಯ ಮಾಡಿರುವ ಅಂಶ ಬೆಳಕಿಗೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಜುಲೈಯಲ್ಲಿ ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿದ್ದು, ಹಂತಕರಿಗೆ ಹಣಕಾಸು ನೆರವು ನೀಡಿದ್ದರಲ್ಲಿ ಫುಲ್ವಾರಿ ಪ್ರಕರಣದಲ್ಲಿ ಬಂಧಿತರಾಗಿರುವ ಪುತ್ತೂರು, ಬಂಟ್ವಾಳದ ಐವರ ಪಾತ್ರ ಇರುವುದು ತನಿಖೆಯ ವೇಳೆ ಕಂಡುಬಂದಿದೆ.

ಇನ್ನು ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲಾದ ಪ್ರಮುಖ ಮೂವರು ಆರೋಪಿಗಳ ಪೈಕಿ ಓರ್ವನಾಗಿರುವ ಅಂಕತ್ತಡ್ಕ ನಿವಾಸಿ ರಿಯಾಜ್‌ ಮನೆಯಲ್ಲಿದ್ದ ಮೊಬೈಲ್‌ ಪರಿಶೀಲನೆ ನಡೆಸಿದ ಸಂದರ್ಭ ಆತನ ಖಾತೆಗೆ ಹಣ ಸಂದಾಯ ಆಗಿರುವುದು ಕಂಡುಬಂದಿತ್ತು.