Saturday, February 1, 2025
ಸುದ್ದಿ

ಹೊನ್ನಾವರ ಬಳಿ ರಸ್ತೆ ಅಪಘಾತ..! ಕಾಪು ತಾಲೂಕಿನ ಸಹಾಯಕ ಪ್ರಾಧ್ಯಾಪಕ ಸಾವು..!-ಕಹಳೆ ನ್ಯೂಸ್

ಉಡುಪಿ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾಪು ತಾಲೂಕಿನ ಬಂಟಕಲ್ಲು ಶ್ರೀಮಧ್ವವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ್ ರಾವ್ (40) ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ನಿವಾಸಿಯಾಗಿರುವ ಇವರು, ತಮ್ಮ ಕಾರಿನಲ್ಲಿ ಉಡುಪಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಸೋದೆ ಮೂಲಮಠಕ್ಕೆ ಹೋಗುತ್ತಿದ್ದರೆನ್ನಲಾಗಿದೆ. ಈ ವೇಳೆ ಇವರ ಕಾರಿಗೆ ಕಂಟೈನರ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಇವರು ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ.ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.