ಜಿಲ್ಲಾಧಿಕಾರಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿ ಯುವಕನ ಉದ್ಧಟತನ : ಪೊಲೀಸರಿಂದ ಖಡಕ್ ವಾರ್ನಿಂಗ್ –ಕಹಳೆ ನ್ಯೂಸ್
ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಮೇಲೆ ಆಜಾನ್ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಯುವಕನನ್ನು ಜಯನಗರ ಪೊಲೀಸ್ ಠಾಣೆಗೆ ಕರೆತಂದು ಪೊಲೀಸರು ಎಚ್ಚರಿಕೆ ನೀಡಿ ಠಾಣಾ ಜಾಮೀನಿನ ಮೇಲೆ ವಾಪಸ್ ಕಳುಹಿಸಿದ್ದಾರೆ.
ಆಜಾನ್ ಕೂಗಿದ್ದ ಯುವಕನನ್ನು ರಾಗಿಗುಡ್ಡದ ನಿವಾಸಿ ಮೌಸಿನ್ (27) ಎಂದು ಗುರುತಿಸಲಾಗಿದೆ. ಈತ ನಿಷೇಧಿತ ಪಿಎಫ್‍ಐ ಸದಸ್ಯನಾಗಿದ್ದು, ವೆಲ್ಡಿಂಗ್ ಕೆಲಸ ಮಾಡುತ್ತಿದ್ದ.
ಆಜಾನ್ ಹಾಗೂ ಅಲ್ಲಾಹು ಬಗ್ಗೆ ಮಾಜಿ ಸಚಿವ ಈಶ್ವರಪ್ಪ ಅವಹೇಳನ ಆರೋಪ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡರು ಶಿವಮೊಗ್ಗದ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮೌಸಿನ್ ಶಿವಮೊಗ್ಗದ ಜಿಲ್ಲಾಧಿಕಾರಿಯ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ್ದ. ಈ ವೇಳೆ ಆಜಾನ್ ಕೂಗಿ ಉದ್ಧಟತನ ತೋರಿದ ಯುವಕನಿಗೆ ಮುಸ್ಲಿಂ ಮುಖಂಡರು ಬೈದು ಬುದ್ಧಿ ಹೇಳಿದ್ದರು.
ಘಟನೆಗೆ ಸಂಬಂಧಿಸಿದಂತೆ ಆಜಾನ್ ಕೂಗುವುದಕ್ಕೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮೌಸಿನ್‍ನನ್ನು ಜಯನಗರ ಠಾಣೆಗೆ ಕರೆತಂದು ಪೊಲೀಸರು ಎಚ್ಚರಿಕೆ ನೀಡಿ ಸಿಆರ್‌ಪಿಸಿ 107 ಅಡಿ ಪ್ರಕರಣ ದಾಖಲಿಸಿದ್ದಾರೆ. ಬಳಿಕ ಠಾಣಾ ಜಾಮೀನಿನ ಮೇಲೆ ಮೌಸಿನ್‍ನನ್ನು ಪೊಲೀಸರು ವಾಪಸ್ ಕಳುಹಿಸಿದ್ದಾರೆ.