ಚಾಮರಾಜನರ : ಗಂಡ-ಹೆಂಡತಿ ನಡುವಿನ ಜಗಳ ತಾರಕಕ್ಕೇರಿ ಪತ್ನಿಯನ್ನೆ ಕೊಲೆ ಮಾಡಿದ ಘಟನೆ ಚಾಮರಾಜನಗರದ ಕೊತ್ತಲವಾಡಿ ಗ್ರಾಮದಲ್ಲಿ ನಡೆದಿದೆ.
30 ವರ್ಷದ ರತ್ನಮ್ಮ ಪತಿಯಿಂದಲೇ ಕೊಲೆಯಾದ ಮಹಿಳೆ. ಪತಿ ಮಹೇಶ್ ರತ್ನಮ್ಮಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾನೆ.
ಮನೆಯಲ್ಲಿ ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಇಂದು ಜಗಳ ವಿಕೋಪಕ್ಕೆ ತಿರುಗಿದ್ದು, ಮಚ್ಚು ಹಿಡಿದು ಬಂದ ಮಹೇಶ್ ಪತ್ನಿಯ ಮೇಲೆ ಮನಬಂದಂತೆ ಬೀಸಿದ್ದು, ಕೊಚ್ಚಿ ಕೊಲೆಗೈದಿದ್ದಾನೆ. ಸ್ಥಳದಲ್ಲೇ ಪತ್ನಿ ಸಾವನ್ನಪ್ಪಿದ್ದಾಳೆ.
ಚಾಮರಾಜನಗರ ಗ್ರಾಮಾಂತರ ಪೊಲೀಸರು ಆರೋಪಿ ಮಹೇಶ್ ನನ್ನು ಬಂಧಿಸಿದ್ದಾರೆ.