Recent Posts

Monday, January 27, 2025
ಸುದ್ದಿ

777 ಚಾರ್ಲಿ ಬಳಿಕ ತೆರೆಗೆ ಬರಲು ರೆಡಿಯಾದ ರಕ್ಷಿತ್‌ ಶೆಟ್ಟಿ ನಟನೆಯ `ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ – ಕಹಳೆ ನ್ಯೂಸ್

777 ಚಾರ್ಲಿ ಸಿನಿಮಾದ ಬಳಿಕ ರಕ್ಷಿತ್ ಶೆಟ್ಟಿ ನಟನೆಯ ಮುಂದಿನ ಸಿನಿಮಾ ಯಾವುದು ಎಂದು ಕಾಯ್ತಿರೋ ಅಭಿಮಾನಿಗಳಿಗೆ ಶೆಟ್ರು ಗುಡ್ ನ್ಯೂಸ್ ನೀಡಿದ್ದಾರೆ. ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ ಇದೀಗ ತಮ್ಮ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ʻಸಪ್ತಸಾಗರದಾಚೆ ಎಲ್ಲೋʼ ಚಿತ್ರದ ಶೂಟಿಂಗ್‌ ಮುಗಿಸಿರುವು ರಕ್ಷಿತ್ ಶೆಟ್ಟಿ ಸಿನಿಮಾವನ್ನು ತೆರೆಗೆ ತರಲು ಮುಂದಾಗಿದ್ದಾರೆ.

ಸಿಂಪಲ್ ಸ್ಟಾರ್ ರಕ್ಷಿತ್ ಇದೀಗ `ಸಪ್ತಸಾಗರದಾಚೆ ಎಲ್ಲೋ’ ಚಿತ್ರದ ಮೂಲಕ ಗಮನ ಸೆಳೆಯುತ್ತಿದ್ದಾರೆ. ರಕ್ಷಿತ್‌ಗೆ ನಾಯಕಿಯರಾಗಿ ರುಕ್ಮಿಣಿ ವಸಂತ್ ಮತ್ತು ಚೈತ್ರಾ ಆಚಾರ್ ನಟಿಸಿದ್ದಾರೆ. ಬರೋಬ್ಬರಿ 137 ದಿನಗಳ ಕಾಲ ಸಿನಿಮಾ ಚಿತ್ರೀಕರಣ ಮಾಡಿರುವ ಚಿತ್ರತಂಡ ಇದೀಗ ಕಡಲ ತಡಿಯಲ್ಲಿ ಪೂಜೆ ಸಲ್ಲಿಸಿ ಕುಂಬಳ ಕಾಯಿ ಒಡೆದಿದೆ. ಈ ವಿಚಾರವನ್ನು ನಟ ರಕ್ಷಿತ್ ಶೆಟ್ಟಿ ವಿಡಿಯೋ ಸಮೇತ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಪ್ರೊಡಕ್ಷನ್ ವರ್ಕ್ ಶುರು ಮಾಡಿದ್ದಾರೆ.

ಕವಲು ದಾರಿ' ಸಿನಿಮಾದ ನಂತರ ನಿರ್ದೇಶಕ ಹೇಮಂತ್ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್‌ಗೆ ಒಂದಷ್ಟು ದಿನ ವರ್ಕ್ ಶಾಪ್ ನಡೆಸಿ ನಂತರ ಚಿತ್ರೀಕರಣ ಆರಂಭಿಸಿದ್ದು, ಚಿತ್ರದಲ್ಲಿ 2 ಭಿನ್ನ ಶೇಡ್‌ಗಳಿರೋ ಪಾತ್ರದಲ್ಲಿ ರಕ್ಷಿತ್ ನಟಿಸಿದ್ದಾರೆ.

ಈ ಸಿನಿಮಾದ ಪಾತ್ರಕ್ಕಾಗಿ ರಕ್ಷಿತ್ ಶೆಟ್ಟಿ 15 ರಿಂದ 20 ಕೆಜಿ ತೂಕ ಹೆಚ್ಚಿಸಿಕೊಂಡು ಮತ್ತೆ ತೂಕ ಇಳಿಸಿಕೊಂಡು ಕಸರತ್ತು ಮಾಡಿದ್ದಾರೆ. ಚಿತ್ರದಲ್ಲಿ ನಾಯಕನ 25 ಹಾಗೂ 45ರ ವಯೋಮಾನದ ಕುರಿತ ಕಥೆ ಇದೆ. ಅದಕ್ಕೆ ತಕ್ಕಂತೆ ಅರ್ಧ ಸಿನಿಮಾ ಸ್ಲಿಮ್ ಅಂಡ್ ಸ್ಮಾರ್ಟ್ ಕಾಲೇಜು ಹುಡುಗನಾಗಿ ರಕ್ಷಿತ್ ಮಿಂಚಿದ್ದಾರೆ. ಹಾಗೆಯೇ ಗಡ್ಡ ಬಿಟ್ಟು ರಗಡ್ ಆಗಿ ಕೂಡ ಕಾಣಿಸಿಕೊಂಡಿದ್ದಾರೆ.