Sunday, January 26, 2025
ಸುದ್ದಿ

ಮಂಗಳೂರು ತಾಲೂಕಿನ*ನಲ್ಲಿ ನಿರ್ಮಾಣಗೊಂಡ ವಿವಿಧ ಕಟ್ಟಡಗಳ ಉದ್ಘಾಟನೆ ನೆರವೇರಿಸಿದ ಶಾಸಕ ವೈ ಭರತ್ ಶೆಟ್ಟಿ

ಪಕ್ಷ ಅಧಿಕಾರಕ್ಕೆ ಬಂದ ಪ್ರಾರಂಭದಲ್ಲಿ ನೆರೆ ಮತ್ತು ಕೋವಿಡ್ ನಿಂದಾಗಿ ಸಮಸ್ಯೆ ಎದುರಾಗಿತ್ತು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಗಮನ ಕೊಡಲು ಸಾಧ್ಯವಾಗಿರಲಿಲ್ಲ, ಕಳೆದ ಎರಡು  ವರ್ಷಗಳಲ್ಲಿ ಗ್ರಾಮೀಣ ಪ್ರದೇಶದ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಗರಿಷ್ಠ ಅನುದಾನ ನೀಡಲಾಗಿದೆ. ಜನರ ಸಮಸ್ಯೆಗಳಿಗೆ, ಕಷ್ಟಗಳಿಗೆ ಸ್ಪಂದಿಸಿದ್ದೇನೆ ಎಂಬ ವಿಶ್ವಾಸವಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ.ಭರತ್ ಶೆಟ್ಟಿ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ತಾಲೂಕಿನ ಎಡಪದವು ಗ್ರಾಮ ಪಂಚಾಯತ್ ಕಚೇರಿ ಬಳಿ ಕಳೆದ ಮೂವತ್ತು ವರ್ಷಗಳಿಂದ ಸ್ಥಗಿತಗೊಂಡಿದ್ದ ಮಂಗಳವಾರ ಸಂತೆಗೆ 9.20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ  ಮಾಡಲಾಗಿರುವ ಸುಸಜ್ಜಿತ ಮಾರುಕಟ್ಟೆ, 3.5 ಲಕ್ಷ ವೆಚ್ಚದಲ್ಲಿ ಅಂಗನವಾಡಿಗೆ ನಿರ್ಮಿಸಿರುವ ಬಾಲವನವನ್ನು ಉದ್ಘಾಟಿಸಿ, ಪಾಡ್ಯಾರು ಅಂಗನವಾಡಿಗೆ 20 ಲಕ್ಷ ವೆಚ್ಚದಲ್ಲಿ ನಿರ್ಮಾವಾಗಲಿರುವ ನೂತನ ಕಟ್ಟಡಕ್ಕೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಮಾತನಾಡಿದರು.
ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಭಾಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಎಡಪದವು ಗ್ರಾಮ ಪಂಚಾಯತ್  ಗೆ ಸೇವೆ ಸಲ್ಲಿಸಿದ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಮಾಜಿ ಸದಸ್ಯರು, ಕಂದಾಯ ನಿರೀಕ್ಷಕಿ ಹರಿಣಾಕ್ಷಿ, ನಿವೃತ್ತ ಮುಖ್ಯ ಶಿಕ್ಷಕ ಚಂದಯ್ಯ ಮಾಸ್ಟರ್, ಸಮಾಜ ಸೇವಕ ಚಂದ್ರಶೇಖರ್, ಹಡೀಲು ಭೂಮಿಯಲ್ಲಿ ಕೃಷಿ ಮಾಡಿದ ಹೊನ್ನಯ, ಕೃಷಿಕರಾದ ನಾರಾಯಣ ನಾಯಕ್ ಮೊದಲದವರನ್ನು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಶಾಸಕರು ವೇದಿಕೆಯಲ್ಲಿ ಗೌರವಿಸಿದರು.

ಗ್ರಾಮ ಪಂಚಾಯತ್ ಆಡಳಿತ ಮತ್ತು ನಾಗರಿಕರ ಪರವಾಗಿ ಶಾಸಕ ಭರತ್ ಶೆಟ್ಟಿ ಮತ್ತು ಜನಾರ್ಧನ ಗೌಡ ಅವರನ್ನು  ಶಾಲು ಹೊದೆಸಿ, ಸ್ಮರಣಿಕೆ, ಫಲಫುಷ್ಪ ನೀಡಿ ಸನ್ಮಾನಿಸಲಾಯಿತು.

ಪಂಚಾಯತ್ ಅಧ್ಯಕ್ಷ ಸುಕುಮಾರ್ ದೇವಾಡಿಗ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಜನಾರ್ಧನ ಗೌಡ,
ಎಪಿಎಂಸಿ ಸದಸ್ಯ ರುಕ್ಮಯ ನಾಯ್ಕ್, ಸಂಜೀವಿನಿ ಒಕ್ಕೂಟಗಳ ಸುಬ್ರಮಣ್ಯ ಟಿ.ಪಿ.ಎಂ. ಮೊದಲಾದವರು ವೇದಿಕೆಯಲ್ಲಿ ಇದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೀವಿ, ಡಿ. ನಾಯ್ಕ್, ಎಡಪದವು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಸಾದ್ ಕುಮಾರ್, ಎಂ.  ಪಂಚಾಯತ್ ಸದಸ್ಯರು,
ಗ್ರಾಮದ ಹಿರಿಯರು, ಗಣ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಬಿಜೆಪಿಯ ಪ್ರಮುಖರು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 
ಕುಶಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.