Thursday, January 23, 2025
ಸುದ್ದಿ

ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಆದಿ ಜಾಂಭವ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಣೆ – ಕಹಳೆ ನ್ಯೂಸ್

ಬಂಟ್ವಾಳ: ಡಾ! ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಆದಿ ಜಾಂಭವ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ನೀಡುವ ದ್ವಿಚಕ್ರ ವಾಹನ ಸೌಲಭ್ಯವನ್ನು ಬಂಟ್ವಾಳ ಶಾಸಕ ರಾಜೇಶ್ ಉಳಿಪ್ಪಾಡಿಗುತ್ತು ಅವರು ಬಿಸಿರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ವಿತರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ದಿನ ಒಟ್ಟು 23 ಫಲಾನುಭವಿಗಳಿಗೆ ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡಲಾಗಿದ್ದು, ಉಳಿದ ಫಲಾನುಭವಿಗಳಿಗೆ ಕಚೇರಿಯಲ್ಲಿ ವಿತರಿಸಲಾಗುತ್ತದೆ ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.
ಫಲಾನುಭವಿಗಳು ಸರಕಾರ ನೀಡಿದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿ, ಪ್ರಯೋಜನ ಪಡೆಯಲು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 413 ಫಲಾನುಭವಿಗಳಿಗೆ ಸೌಲಭ್ಯ ನೀಡಲಿದ್ದು ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ಮುಖ್ಯ ಮಂತ್ರಿ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ 40 ಜನರಿಗೆ ವಿತರಣೆ ಮಾಡಲಾಗಿದೆ.
ಉಳಿದಿರುವ ಸೌಲಭ್ಯಗಳನ್ನು ತಾಲೂಕು ಕೇಂದ್ರ ಗಳಲ್ಲಿ ವಿತರಣೆ ಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಬಂಟ್ವಾಳದಲ್ಲಿ ಅತೀ ಹೆಚ್ಚು 70 ಫಲಾನುಭವಿಗಳಿಗೆ ಸೌಲಭ್ಯ ನೀಡಲಾಗಿದ್ದು ಈಗಾಗಲೇ 29 ಮಂದಿಗೆ ವಿತರಿಸಲಾಗಿದೆ. ಉಳಿದಿರುವ ಸೌಲಭ್ಯಗಳನ್ನು ಕ್ರಮಬದ್ದವಾಗಿ ಕಚೇರಿಯಲ್ಲಿ ವಿತರಿಸಲಾಗುತ್ತದೆ ಎಂದು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮನೀಶ್ ನಾಯಕ್ ತಿಳಿಸಿದರು.

ಈ ಸಂದರ್ಭದಲ್ಲಿ ಬಾಳ್ತಿಲ ಗ್ರಾ.ಪಂ.ಅಧ್ಯಕ್ಷೆ ಹಿರಣ್ಮಿಯಿ, ನರಿಕೊಂಬು ಗ್ರಾ.ಪಂ. ಅಧ್ಯಕ್ಷೆ ವನಿತಾ ಪುರುಷೋತ್ತಮ, ಎಸ್.ಟಿ.ಮೋರ್ಚಾದ ಅಧ್ಯಕ್ಷ ರಾಮ ನಾಯ್ಕ್, ಪ್ರಧಾನ ಕಾರ್ಯದರ್ಶಿ ಯಶವಂತ ನಗ್ರಿ, ಎಸ್.ಸಿ.ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಚೆಂಡ್ತಿಮಾರ್, ಗ್ರಾ.ಪಂ.ಸದಸ್ಯರಾದ ಪ್ರಶಾಂತ್ ಪೂಜಾರಿ ವಿಟ್ಲುಕೋಡಿ, ಪ್ರಮುಖರಾದ ಮಹೇಶ್ ಶೆಟ್ಟಿ ಜುಮಾದಿಗುಡ್ಡೆ, ಚರಣ್ ಜುಮಾದಿಗುಡ್ಡೆ, ಶಶಿರಾಜ್ ಶೆಟ್ಟಿ ಸರಪಾಡಿ,ರಮೇಶ್ ರಾವ್ ಮಂಚಿ ಮತ್ತಿತರರು ಉಪಸ್ಥಿತರಿದ್ದರು.